ರಾಜ್ಯ

ಧಾರವಾಡದಲ್ಲಿ ಮನಕಲಕುವ ಘಟನೆ: ಕಾಲುಜಾರಿ ಕೆರೆಗೆ ಬಿದ್ದು 3 ವರ್ಷದ ಅವಳಿ ಮಕ್ಕಳು ನೀರುಪಾಲು

ಆಟವಾಡುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಅವಳಿಮಕ್ಕಳಿಬ್ಬರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಧಾರವಾಡದಲ್ಲಿ ಮನಕಲಕುವ ಘಟನೆ: ಕಾಲುಜಾರಿ ಕೆರೆಗೆ ಬಿದ್ದು 3 ವರ್ಷದ ಅವಳಿ ಮಕ್ಕಳು ನೀರುಪಾಲು
ಅವಳಿ ಮಕ್ಕಳು ನೀರುಪಾಲು
Published On :

ಧಾರವಾಡ: ಆಟವಾಡುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಅವಳಿಮಕ್ಕಳಿಬ್ಬರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳನ್ನು ಮೂರು ವರ್ಷದ ಮುದಸ್ಸಿರ್ ಮತ್ತು ಮುಜಮ್ಮಿಲ್ ಎಂದು ಗುರುತಿಸಲಾಗಿದೆ. ಮನೆಯ ಪಕ್ಕದಲ್ಲೇ ಕೆರೆ ಇದ್ದು ಆಟವಾಡುತ್ತಿದ್ದಾಗ ಮಕ್ಕಳು ಆಯಾತಪ್ಪಿ ಕೆರೆ ಬಿದ್ದಿದ್ದಾರೆ. ಇನ್ನು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕುಂದಗೋಳ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.