ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ!
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರು ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿಟಿ ರವಿ, ಸಂಸದ ಡಾ. ಮಂಜುನಾಥ್ ಮತ್ತಿತರ ಬಿಜೆಪಿ ನಾಯಕರು ಹೂ ಗುಚ್ಚ ನೀಡಿ ಸ್ವಾಗತಿಸಿದರು.
ಶುಕ್ರವಾರ ನೆಲಮಂಗಲ ಸಮೀಪ ನಡೆಯುವ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಶುಕ್ರವಾರ ಬೆಳಗ್ಗೆ 10-30ಕ್ಕೆ ನೆಲಮಂಗಲಕ್ಕೆ ತೆರಳಿ ಬಿಜೆಪಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ ನವದೆಹಲಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಭೇಟಿ ವೇಳೆಯಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


