ರಾಜ್ಯ

ಲೋಕಾಯುಕ್ತರ ಹೆಸರಲ್ಲಿ ಹಣ ವಸೂಲಿ ಆರೋಪ: ನಿಂಗಪ್ಪಗೆ ಮಧ್ಯಂತರ ಜಾಮೀನು

ನಿಂಗಪ್ಪ ಪತ್ನಿ ಜಿ ಕೆ ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.

ಲೋಕಾಯುಕ್ತರ ಹೆಸರಲ್ಲಿ ಹಣ ವಸೂಲಿ ಆರೋಪ: ನಿಂಗಪ್ಪಗೆ ಮಧ್ಯಂತರ ಜಾಮೀನು
ಕರ್ನಾಟಕ ಹೈಕೋರ್ಟ್
Published On :

ಬೆಂಗಳೂರು: ಲೋಕಾಯುಕ್ತರ ಹೆಸರಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಿವೃತ್ತ ಹೆಡ್‌ ಕಾನ್‌ಸ್ಟೆಬಲ್‌ ನಿಂಗಪ್ಪ ಸಾವಂತ್‌ಗೆ ಹೈಕೋರ್ಟ್‌ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ನಿಂಗಪ್ಪ ಪತ್ನಿ ಜಿ ಕೆ ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಮತ್ತು ಲೋಕಾಯುಕ್ತ ಪೊಲೀಸರು ಮಾಧ್ಯಮಗಳ ಜೊತೆ ಮಾತನಾಡುವಂತಿಲ್ಲ ಎಂಬ ಷರತ್ತನ್ನೂ ಇದೇ ವೇಳೆ ನ್ಯಾಯಾಲಯ ವಿಧಿಸಿದೆ.

ಸರ್ಕಾರಿ ಅಧಿಕಾರಿಗಳಿಂದ ಹಲವಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಜೂನ್ 2 ರಂದು ನಿಂಗಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.