ರಾಜ್ಯ

ಬಳ್ಳಾರಿ: ಕಮಲಾಪುರದ ಅಟಲ್‌ಜೀ ಮೃಗಾಲಯದಲ್ಲಿ ಹೆಣ್ಣು ಹುಲಿ 'ದೇವಿ' ಸಾವು

18 ರಿಂದ 19 ವರ್ಷದ ದೇವಿ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು.

ಬಳ್ಳಾರಿ: ಕಮಲಾಪುರದ ಅಟಲ್‌ಜೀ ಮೃಗಾಲಯದಲ್ಲಿ ಹೆಣ್ಣು ಹುಲಿ 'ದೇವಿ' ಸಾವು
Published On :

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಶ್ರೀ ಅಟಲ್​​​ ಬಿಹಾರಿ ವಾಜಪೇಯಿ Zoological ಪಾರ್ಕ್‌ನಲ್ಲಿ​ 'ದೇವಿ' ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದೆ ಎಂದು ಉಪ ಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.

ಅಂದಾಜು 18 ರಿಂದ 19 ವರ್ಷದ ದೇವಿ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು.

ಕಳೆದ ಎರಡು ವರ್ಷಗಳಿಂದ ಮೃಗಾಲಯದಲ್ಲಿರುವ ರಕ್ಷಣಾ ಕೇಂದ್ರದಲ್ಲಿ ವೈದ್ಯೋಪಚಾರ ನೀಡಲಾಗಿತ್ತು. ಆರೋಗ್ಯದಲ್ಲಿಯೂ ಸುಧಾರಣೆ ಕಂಡು ಬಂದಿತ್ತು. ಆದರೆ ಇದೀಗ ವಯೋಸಹಜವಾಗಿ ಮೃತಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.