ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ: ಸಚಿವ ಪರಮೇಶ್ವರ್ ಯೂ-ಟರ್ನ್
ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ. ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ.

ಬೆಂಗಳೂರು: ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಲೆ ಮತ್ತು ಸಂಸ್ಕೃತಿ ವಿಭಿನ್ನವಾಗಿದೆ, ಅದರ ಬಗ್ಗೆ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ತುಮಕೂರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡುವುದಿಲ್ಲ. ತುಮಕೂರು ವೇಗವಾಗಿ ಬೆಳೆಯುತ್ತಿದೆ ಎಂಬುದು ನಿಜ. ನಮ್ಮ ಮೆಟ್ರೋ ಜಾಲವನ್ನು ಜಿಲ್ಲೆಗೆ ವಿಸ್ತರಿಸಲು ಮತ್ತು ಇಲ್ಲಿಗೆ ಹೆಚ್ಚಿನ ಕೈಗಾರಿಕೆಗಳನ್ನು ಆಹ್ವಾನಿಸಲು ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದರು.
ತುಮಕೂರು ಬೆಂಗಳೂರಿನ ದಕ್ಷಿಣ ಆಗಬಹುದು ಎಂದು ಕೇಳಿದಾಗ ನಾನು ಆದರೂ ಆಗಬಹುದು ಎಂದು ಹೇಳಿದ್ದೆ. ಆದರೆ ತುಮಕೂರಿನ ಜಿಲ್ಲೆಯ ಹೆಸರು ಬದಲಾಯಿಸುತ್ತೇವೆಂದು ಹೇಳಿರಲಿಲ್ಲ. ತುಮಕೂರಿನ ಹೆಸರನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ. ಅದಕ್ಕೆ ಅದರದೇ ಆದಂತ ಇತಿಹಾಸ ಸಂಸ್ಕೃತಿ ಇದೆ. ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರು ಬದಲಾಯಿಸುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರು ವ್ಯಾಪ್ತಿಗೆ ಸೇರಿಸುವ ಪ್ರಶ್ನೆಗೆ ನಾನು ಉತ್ತರಿಸಿದ್ದೆ. ಆದರೂ ಆಗಬಹುದು ಎಂದಿದ್ದೆ. ಆದರೆ, ತುಮಕೂರು ಹೆಸರು ಬದಲಾಯಿಸುತ್ತೇವೆ ಅಂತ ಹೇಳಿಲ್ಲ. ಜಿಲ್ಲೆಯ ಹೆಸರು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.
ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ.ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ. ಅದಕ್ಕಾಗಿ ತುಮಕೂರು ಹೆಸರನ್ನು ಯಾವುದೇ ಕಾರಣಕ್ಕೂ ಎಷ್ಟೇ ಬದಲಾವಣೆ ಅಭಿವೃದ್ಧಿ ಆದರೂ ಹೆಸರನ್ನು ಮಾತ್ರ ಬದಲಾಯಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



