'ವಂಚನೆ' ಪ್ರಕರಣ: ಐಶ್ವರ್ಯ ಗೌಡ ಸೇರಿ 18 ಜನರ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರಿನ ಪಿಎಂಎಲ್‌ಎ ನ್ಯಾಯಾಲಯಕ್ಕೆ ಜೂನ್ 21 ರಂದು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ತಿಳಿಸಿದೆ.
ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನ್ಯಾಯಾಲಯಕ್ಕೆ ಜೂನ್ 21 ರಂದು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಪ್ರಕರಣದಲ್ಲಿ ಇತ್ತೀಚೆಗೆ ಇಡಿ 3.98 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಿರಿಯ ಸಹೋದರ, ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಅವರು ನಿನ್ನೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24-25 ರಂದು ಕರ್ನಾಟಕದ 14 ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು. ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲ(ED)ಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



