ನೇರಳೆ ಹಣ್ಣು ಲಂಡನ್ ಗೆ ರಫ್ತು: ಸಾಂಪ್ರದಾಯಿಕ ಹಣ್ಣಿಗೆ ಜಾಗತಿಕ ಮಾರುಕಟ್ಟೆ
ನೇರಳೆ ಹಣ್ಣಿಗೆ ಈಗ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಲಂಡನ್ ಗೆ ಕರ್ನಾಟಕದಿಂದ ರಫ್ತು ಮಾಡಲಾಗುತ್ತದೆ.

ಬೆಂಗಳೂರು: ಬೇಸಿಗೆ ಕಾಲದಲ್ಲಿ ಫಲ ಬಿಡುವ ನೇರಳೆ ಹಣ್ಣು ತಿನ್ನಲು ಬಲು ರುಚಿ ಜೊತೆಗೆ ಇದರಲ್ಲಿ ಹಲವಾರು ಔಷಧೀಯ ಗುಣಗಳು ಕೂಡ ಇವೆ.
ನೇರಳೆ ಹಣ್ಣು ಒಂದು ಸೀಸನಲ್ ಹಣ್ಣಾಗಿದ್ದು, ಇದನ್ನು ಜಾಮೂನ್ ಎಂದೂ ಕರೆಯುತ್ತಾರೆ. ಈ ಹಣ್ಣು ಅದರ ಗಾಢ ಬಣ್ಣ ಮತ್ತು ಹುಳಿ ಸಿಹಿ ರುಚಿಯಿಂದಾಗಿ ಜನರು ಇಷ್ಟಪಡುತ್ತಾರೆ. ಮಾರುಕಟ್ಟೆಯಲ್ಲಿ ಇದಕ್ಕೆ ಬೆಲೆ ಸ್ವಲ್ಪ ಹೆಚ್ಚು. ಹಳ್ಳಿ ಭಾಗಗಳಲ್ಲಿ ಗುಡ್ಡಗಳಲ್ಲಿ ನೇರಳೆ ಹಣ್ಣಿನ ಮರಗಳಿರುವುದು ಸಾಮಾನ್ಯ.
ಇಂತಹ ನೇರಳೆ ಹಣ್ಣಿಗೆ ಈಗ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಲಂಡನ್ ಗೆ ಕರ್ನಾಟಕದಿಂದ ರಫ್ತು ಮಾಡಲಾಗುತ್ತದೆ.
ಕೇಂದ್ರ ವಾಣಿಜ್ಯ ಸಚಿವಾಲಯದ ಅಂಗಸಂಸ್ಥೆಯಾಗಿರುವ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವು(APEDA) ಕರ್ನಾಟಕದಿಂದ ಲಂಡನ್ ಗೆ ತಾಜಾ ನೇರಳೆ ಹಣ್ಣುಗಳ ರಫ್ತಿಗೆ ಚಾಲನೆ ನೀಡಿದೆ.
ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


