ರಾಜ್ಯ

ಗದಗ: ಸರ್ಕಾರಿ ಶಾಲೆಯ ಛಾವಣಿ ಕುಸಿದು, ಮೂವರಿಗೆ ಗಾಯ!

6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ.

ಗದಗ: ಸರ್ಕಾರಿ ಶಾಲೆಯ ಛಾವಣಿ ಕುಸಿದು, ಮೂವರಿಗೆ ಗಾಯ!
ಶಾಲಾ ಛಾವಣಿ ಕುಸಿತದ ಚಿತ್ರ
Published On :

ಗದಗ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಛಾವಣಿ ಕುಸಿದು ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರ ಗಡ ತಾಲ್ಲೂಕಿನ ಚಿಲಝರಿ ಗ್ರಾಮದಲ್ಲಿ ನಡೆದಿದೆ.

6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ.

ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಛಾವಣಿ ಕುಸಿತದಿಂದ ಹಲವು ಡೆಸ್ಕ್‌ಗಳು, ಬೆಂಚುಗಳು ಸೇರಿದಂತೆ ಪೀಠೋಪಕರಣಗಳಿಗೂ ಹಾನಿಯಾಗಿದೆ. ಘಟನೆ ನಡೆದ ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ರಕ್ಷಣೆಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗದಗ ಎಸ್ ಪಿ, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕನಿಗೆ ಗಾಯಗಳಾಗಿವೆ. ಬಿಇಒ ಅಥವಾ ಬೇರೆ ಯಾರಾದರೂ ದೂರು ದಾಖಲಿಸಿದರೆ, ಕೇಸ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.