1995 ರಲ್ಲಿ ಆದ ಪ್ರಮಾದ: ಗದಗ ಜಿಲ್ಲೆಯ ಈ ಗ್ರಾಮಸ್ಥರ ಜಮೀನುಗಳು ಈಗಲೂ ಸರ್ಕಾರದ ಹೆಸರಿನಲ್ಲಿ!
ಗ್ರಾಮಸ್ಥರು ಅನೇಕ ವರ್ಷಗಳಿಂದ ಅಧಿಕಾರಕ್ಕೆ ಬಂದ ಸಚಿವರು ಮತ್ತು ಸಂಸದರನ್ನು ಭೇಟಿ ಮಾಡಿದ್ದಾರೆ, ಆದರೆ ಪ್ರಯತ್ನಗಳೆಲ್ಲಾ ವ್ಯರ್ಥವಾಗಿದೆ. ಈಗ ಎಚ್ಚೆತ್ತುಕೊಂಡಿರುವ ನೂರಾರು ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಗದಗ: ಗದಗ ಜಿಲ್ಲೆಯ ಹಡ್ಲಿ ಮತ್ತು ಸುತ್ತಮುತ್ತಲ ಹಳ್ಳಿಗಳ ನೂರಾರು ರೈತರು ಕಳೆದ ಮೂರು ದಶಕಗಳಿಂದ ಯಾವುದೇ ಸರ್ಕಾರಿ ಸವಲತ್ತುಗಳನ್ನು ಪಡೆದಿಲ್ಲ ಎಂದರೆ ಅಚ್ಚರಿಯಾಗಬಹುದು.
ಇದಕ್ಕೆ ಕಾರಣ ಈ ಹಳ್ಳಿಯವರ ಕೃಷಿ ಭೂಮಿ ಇನ್ನೂ ಕರ್ನಾಟಕ ಸರ್ಕಾರದ ಹೆಸರಿನಲ್ಲಿದೆ. 1995 ರಲ್ಲಿ ಕೆಲವು ರೈತರು ನೀರಾವರಿ ತೆರಿಗೆ ಪಾವತಿಸಲು ವಿಳಂಬ ಮಾಡಿದ್ದರಿಂದ ಆಗಿನ ತಹಶೀಲ್ದಾರ್ ದಾಖಲೆಗಳಲ್ಲಿ ಮಾಲೀಕರ ಹೆಸರನ್ನು ಕರ್ನಾಟಕ ಸರ್ಕಾರ ಎಂದು ಬದಲಾಯಿಸಿದ್ದು ಈ ಸಂಕಷ್ಟದ ಪರಿಸ್ಥಿತಿಗೆ ಕಾರಣವಾಗಿದೆ.
ಪಹಣಿ ಅಥವಾ ಆರ್‌ಟಿಸಿ (ಹಕ್ಕುಗಳು, ಬಾಡಿಗೆ ಮತ್ತು ಬೆಳೆಗಳ ದಾಖಲೆಗಳು), ನಮೂನೆ ಸಂಖ್ಯೆ 16, ಕಾಲಮ್ 9 ರಲ್ಲಿ, ಮಾಲೀಕರ ಸಂಖ್ಯೆಯನ್ನು ನಮೂದಿಸಬೇಕು, ನೋಂದಣಿ ಇನ್ನೂ ಕರ್ನಾಟಕ ಸರ್ಕಾರದ ಹೆಸರಿನಲ್ಲಿದೆ.
ಗ್ರಾಮಸ್ಥರು ಅನೇಕ ವರ್ಷಗಳಿಂದ ಅಧಿಕಾರಕ್ಕೆ ಬಂದ ಸಚಿವರು ಮತ್ತು ಸಂಸದರನ್ನು ಭೇಟಿ ಮಾಡಿದ್ದಾರೆ, ಆದರೆ ಪ್ರಯತ್ನಗಳೆಲ್ಲಾ ವ್ಯರ್ಥವಾಗಿದೆ. ಈಗ ನೂರಾರು ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ರೈತ ನಾಯಕರು, ಜನಪ್ರತಿನಿಧಿಗಳು ರೈತರಿಗೆ ಭರವಸೆ ನೀಡುತ್ತಲೇ ಬಂದಿದ್ದಾರೆ, ಕಳೆದ ಮೂರು ದಶಕಗಳಿಂದಲೂ ರೈತರು ತೆರಿಗೆ ಪಾವತಿಸುತ್ತಿದ್ದಾರೆ. ಅನೇಕ ರೈತರು ಎಲ್ಲಾ ರಾಜಕೀಯ ಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಇದು ಹಡ್ಲಿ ಗ್ರಾಮದಲ್ಲಿ ಮಾತ್ರವಲ್ಲ, ನರಗುಂದ ತಾಲ್ಲೂಕು ವ್ಯಾಪ್ತಿಗೆ ಬರುವ ಗಂಗಾಪುರ ಮತ್ತು ಸುತ್ತಮುತ್ತಲಿನ ಗ್ರಾಮದ ಹೊರವಲಯದಲ್ಲೂ ಇದೆ. ಮಾಜಿ ಸಚಿವ ಮತ್ತು ನರಗುಂದ ಶಾಸಕ ಸಿ.ಸಿ. ಪಾಟೀಲ್ 2022 ರಲ್ಲಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


