ರಾಜ್ಯ

ಬೆಂಗಳೂರು: ಹೃದಯಾಘಾತಕ್ಕೆ 22 ವರ್ಷದ ಸುಪ್ರಿಯಾ ಬಲಿ; 1 ತಿಂಗಳಲ್ಲಿ ಹಾಸನದ 15 ಮಂದಿ ಸಾವು!

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ 22 ವರ್ಷದ ಪದವೀಧರೆ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

ಬೆಂಗಳೂರು: ಹೃದಯಾಘಾತಕ್ಕೆ 22 ವರ್ಷದ ಸುಪ್ರಿಯಾ ಬಲಿ; 1 ತಿಂಗಳಲ್ಲಿ ಹಾಸನದ 15 ಮಂದಿ ಸಾವು!
ಸುಪ್ರಿಯಾ
Published On :

ಹಾಸನ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಯುವತಿ ಬಲಿಯಾಗಿದ್ದಾಳೆ. ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲೇ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ 22 ವರ್ಷದ ಪದವೀಧರೆ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ನಿನ್ನೆ ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಕೂಡಲೇ ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಸುಪ್ರಿಯಾ ಸಾವನ್ನಪ್ಪಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.