ಡಿ.ಕೆ ಶಿವಕುಮಾರ್ ನಾಡ ಪ್ರಭುವಾಗಲಿ: ನಿಶ್ಚಲಾನಂದ ಸ್ವಾಮೀಜಿ
ಡಿಕೆ ಶಿವಕುಮಾರ್ ನಾಡ ಪ್ರಭುವಾಗಲಿ ಎಂಬುದು ನಮ್ಮೆಲ್ಲರ ಆಶಯ. ರಾಜ್ಯವನ್ನು ಮುನ್ನಡೆಸುವ ಶಕ್ತಿ ಡಿಕೆ ಶಿವಕುಮಾರ್ ಅವರಿಗೆ ಸಿಗಲಿ ಎಂದು ಹೇಳಿದರು.

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾಡ ಪ್ರಭುವಾಗಲಿ ಎಂದು ಹಾರೈಸಿದ್ದಾರೆ.
ಇಂದು ಡಾ. ಬಾಬು ಜಗಜೀವನರಾಂ ಭವನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಡಿಕೆ ಶಿವಕುಮಾರ್ ನಾಡ ಪ್ರಭುವಾಗಲಿ ಎಂಬುದು ನಮ್ಮೆಲ್ಲರ ಆಶಯ. ರಾಜ್ಯವನ್ನು ಮುನ್ನಡೆಸುವ ಶಕ್ತಿ ಡಿಕೆ ಶಿವಕುಮಾರ್ ಅವರಿಗೆ ಸಿಗಲಿ ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಛಲ ಬಿಡದೇ ಯಾವುದೇ ಕೆಲಸವನ್ನು ಮಾಡಿ ತೋರಿಸುವಂತವರು. ಅಂತಹ ನಾಯಕ ನಾಡ ಪ್ರಭುವಾಗಲಿ ಎಂಬುದು ನಮ್ಮೇಲ್ಲರ ಆಶಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



