ರಾಜ್ಯ

ಮಂಗಳೂರು: ಕಾಣಿಯೂರಿನ ಉರೂಸ್​ ಕಾರ್ಯಕ್ರಮದಲ್ಲಿ ನೂಕುನುಗ್ಗಲು; ಹಲವರು ತೀವ್ರ ಅಸ್ವಸ್ಥ

ಅಸ್ವಸ್ಥರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು: ಕಾಣಿಯೂರಿನ ಉರೂಸ್​ ಕಾರ್ಯಕ್ರಮದಲ್ಲಿ ನೂಕುನುಗ್ಗಲು; ಹಲವರು ತೀವ್ರ ಅಸ್ವಸ್ಥ
ಸಂಗ್ರಹ ಚಿತ್ರ
Published On :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಣಿಯೂರಿನ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮ ಜೂನ್ 26ರಿಂದ 29ರವರೆಗೆ ಆಯೋಜಿಸಲಾಗಿತ್ತು. ಉರೂಸ್ ಮುಬಾರಕ್‌ನ ಕೊನೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಜನರು ಸೇರಿದ್ದರು. ಸುಮಾರು 30-40 ಸಾವಿರ ಮಂದಿ ಆಗಮಿಸುವ ನಿರೀಕ್ಷೆಯಿತ್ತು. ಆದರೆ ಒಂದು ಲಕ್ಷಕ್ಕೂ ಅಧಿಕ ಜನ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.