ರಾಜ್ಯ

ಟೈಯರ್ ಸ್ಫೋಟ: ರಸ್ತೆ ಬದಿಯ ಮನೆಗೆ ನುಗ್ಗಿದ KSRTC ಬಸ್, 17 ಮಹಿಳೆಯರು ಸೇರಿ 32 ಮಂದಿಗೆ ಗಾಯ

ಆಗುಂಬೆಯಿಂದ ಕೋಲಾರದತ್ತ ಸಾಗುತ್ತಿದ್ದ ಬಸ್ ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುತ್ತಿದ್ದ ವೇಳೆ ಟೈಯರ್‌ ಸ್ಫೋಟಗೊಂಡಿದೆ.

ಟೈಯರ್ ಸ್ಫೋಟ: ರಸ್ತೆ ಬದಿಯ ಮನೆಗೆ ನುಗ್ಗಿದ KSRTC ಬಸ್, 17 ಮಹಿಳೆಯರು ಸೇರಿ 32 ಮಂದಿಗೆ ಗಾಯ
ಮನೆಗೆ ಡಿಕ್ಕಿ ಹೊಡೆದಿರುವ ಬಸ್
Published On :

ತಿಪಟೂರು: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್'ಟಿಸಿ ಬಸ್ಸೊಂದು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದು, ಪರಿಣಾಮ ಘಟನೆಯಲ್ಲಿ 17 ಮಹಿಳೆಯರು ಸೇರಿ 32 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಆಗುಂಬೆಯಿಂದ ಕೋಲಾರದತ್ತ ಸಾಗುತ್ತಿದ್ದ ಬಸ್ ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುತ್ತಿದ್ದ ವೇಳೆ ಟೈಯರ್‌ ಸ್ಫೋಟಗೊಂಡಿದೆ.

ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ನೇರವಾಗಿ ಮನೆಗೆ ನುಗ್ಗಿದೆ. ಅಪಘಾತದ ಪರಿಣಾಮ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಮನೆಗೂ ಹಾನಿಯಾಗಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 17 ಮಹಿಳೆಯರೂ ಸೇರಿ 32 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಘಟನೆ ಬೆನ್ನಲ್ಲೇ ತಿಪಟೂರು ಡಿವೈಎಸ್ಪಿ ವಿನಾಯಕ ಶೇಟಿಗೇರಿ, ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಮತ್ತು ಪಿಎಸ್‌ಐ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದರು. ಇದೇ ವೇಳೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊನ್ನವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.