ಗಾಂಜಾ ಖದೀಮರ ಬೆನ್ನತ್ತಿ ಹೋಗಿದ್ದ ವೇಳೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ PSI ಸಾವು
ರಾತ್ರಿ ಸುಮಾರು 2.30ಕ್ಕೆ ಸೂರ್ಯನಗರ ಸಮೀಪದ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಬರುವಾಗ ಕಾರು ಕೆಟ್ಟು ನಿಂತಿದೆ.

ಬೆಂಗಳೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸ್ಥಳ ಮಹಜರುಗಾಗಿ ಕರೆಯುತ್ತಿದ್ದ ವೇಳೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ತಲಘಟ್ಟಪುರ ಪೊಲೀಸ್ ಠಾಣೆ ಪಿಎಸ್‌ಐ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಮೆಹಬೂಬ್ ಗುಡ್ಡಹಳ್ಳಿ (40) ಮೃತ ಪೊಲೀಸ್. ವಿಜಯಪುರ ಮೂಲದ ಮೆಹಬೂಬ್ ಗುಡ್ಡಹಳ್ಳಿ ಅವರು ಕಳೆದ 1 ವರ್ಷದಿಂದ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಇವರ ಸಹೋದರ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರಾತ್ರಿ ಸುಮಾರು 2.30ಕ್ಕೆ ಸೂರ್ಯನಗರ ಸಮೀಪದ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಬರುವಾಗ ಕಾರು ಕೆಟ್ಟು ನಿಂತಿದೆ. ಈ ವೇಳೆ ಕೆಳಗೆ ಇಳಿದು ಕಾರನ್ನು ಪರಿಶೀಲಿಸುವಾಗ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ಟ್ರಕ್ ಏಕಾಏಕಿ ಮೆಹಬೂಬ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಅಪಘಾತದ ಬಳಿಕ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



