ರಾಜ್ಯ

ಅರಣ್ಯ ಭೂಮಿ ಒತ್ತುವರಿ ಆರೋಪ: ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ಕಾರವಾರ ಜಿಲ್ಲೆಯ ಭಟ್ಕಳ ಪಟ್ಟಣದ ಆರ್‌ಟಿಐ ಕಾರ್ಯಕರ್ತರಾದ ಶಂಕರ್ ನಾಯಕ್, ನಾಗೇಂದ್ರ ನಾಯಕ್ ಮತ್ತು ನಾಗೇಶ್ ನಾಯಕ್ ಅವರು ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಅರಣ್ಯ ಭೂಮಿ ಒತ್ತುವರಿ ಆರೋಪ: ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು
ಮಂಕಾಳು ವೈದ್ಯ
Published On :

ಬೆಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳು ಎಸ್. ವೈದ್ಯ ಅವರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ.

ಕಾರವಾರ ಜಿಲ್ಲೆಯ ಭಟ್ಕಳ ಪಟ್ಟಣದ ಆರ್‌ಟಿಐ ಕಾರ್ಯಕರ್ತರಾದ ಶಂಕರ್ ನಾಯಕ್, ನಾಗೇಂದ್ರ ನಾಯಕ್ ಮತ್ತು ನಾಗೇಶ್ ನಾಯಕ್ ಅವರು ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ದೂರು ಸಲ್ಲಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ, ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ದೂರಿನ ಪ್ರಕಾರ, ಸಚಿವರು ಭಟ್ಕಳ ತಾಲೂಕಿನ ಬೈಲೂರಿನ ಸರ್ಕಾರಿ ಅರಣ್ಯ ಜಾಗದ ಸರ್ವೆ ನಂ- 600ರಲ್ಲಿ ಅಕ್ರಮವಾಗಿ ತಮ್ಮ ಬೀನಾ ವೈದ್ಯ ಶಿಕ್ಷಣ ಸಂಸ್ಥೆಗಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪಿಸಲಾಗಿದೆ.

ಮೇ 18, 2024 ರಂದು ಒತ್ತುವರಿ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ದೂರು ದಾಖಲಾಗಿದ್ದರೂ, ಅರಣ್ಯ ಅಧಿಕಾರಿಗಳು ಸಚಿವ ವೈದ್ಯ ಅವರ ಹೆಸರನ್ನು ಬಿಟ್ಟು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಚಿವ ವೈದ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಪ್ರಕರಣದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.