ರಾಜ್ಯ

ಶಾಲೆಗೆ ದಾಖಲಾತಿಗೆ 6 ವರ್ಷ ವಯಸ್ಸಿನ ನಿಯಮದಲ್ಲಿ ಸಡಿಲಿಕೆಯಿಲ್ಲ: ಸಚಿವ ಮಧು ಬಂಗಾರಪ್ಪ

ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ.

ಶಾಲೆಗೆ ದಾಖಲಾತಿಗೆ 6 ವರ್ಷ ವಯಸ್ಸಿನ ನಿಯಮದಲ್ಲಿ ಸಡಿಲಿಕೆಯಿಲ್ಲ: ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ
Published On :

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು.

ಮಕ್ಕಳಿಗೆ ಯಾವುದೇ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ ಮನವಿ ಮಾಡುತ್ತೇನೆ. ಹೋರಾಟ ಮಾಡೋಕೆ ನಿಮಗೆ ಹಕ್ಕು ಇದೆ. ಆದರೆ, ಪರೀಕ್ಷೆ ಮಕ್ಕಳಿಗೆ ಬಹಳ ಮುಖ್ಯವಾದದ್ದು. ಮಕ್ಕಳ ಭವಿಷ್ಯ ಪರೀಕ್ಷೆಯಲ್ಲಿದೆ. ಮಕ್ಕಳ ಭವಿಷ್ಯಕ್ಕೆ ಯಾವುದೇ ಅಡಚಣೆ ಮಾಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಬಂದ್ ಮಾಡುವ ಹೋರಾಟಗಾರರು ಪರೀಕ್ಷೆಗೆ ಹೋಗಬೇಡಿ ಎಂದು ಮಕ್ಕಳಿಗೆ ಹೇಳುವುದಿಲ್ಲ. ಮಕ್ಕಳು ಗೊಂದಲ ಆಗುವುದು ಬೇಡ. 6,7,8,9 ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ನಡೆಯುತ್ತವೆ. ಮಕ್ಕಳು ಪರೀಕ್ಷೆ ಬರೆಯಲಿ. ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟ ಮಾಡಿದ್ದೇವೆ‌. ವೇಳಾಪಟ್ಟಿ ಬದಲಾವಣೆ ಆದರೆ, ಕಷ್ಟ ಆಗುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಿಕೆ ಸರಿಯಲ್ಲ ಎಂದರು.

ಇದೇ ವೇಳೆ 6 ವರ್ಷದ ನಿಯಮ ವಿಚಾರ ಕುರಿತು ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ. ಇದರಲ್ಲಿ ನಾನೇನು ಮಾಡಲು ಸಾಧ್ಯವಿಲ್ಲ. ಈಗಾಗಲೇ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಕೂಡಾ ಅವರ ಅರ್ಜಿ ವಜಾ ಮಾಡಿದೆ. ನ್ಯಾಯಾಲಯ ಏನೇ ಆದೇಶ ಕೊಟ್ಟರೂ ಅದನ್ನು ಪಾಲನೆ ಮಾಡುತ್ತೇವೆಂದು ಹೇಳಿದರು.

6 ವರ್ಷದ ನಿಯಮದಿಂದ ಬೇಸವಾಗುತ್ತದೆ ನಿಜ. ಆದರೆ ನಿಯಮದ ಪ್ರಕಾರ ನಾವು ನಡೆಯಬೇಕು. 1 ತಿಂಗಳು, 2 ತಿಂಗಳು ಕಡಿಮೆ ಇರುವವರಿಗೆ ಕೊಟ್ಟರೆ ಮತ್ತೊಬ್ಬರು ಕೇಳುತ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗುವ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ, ಅದು ಕಾನೂನಿನಲ್ಲಿ ಇಲ್ಲ‌. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ. ಈಗ ಈ ವಿಷಯ ಕೋರ್ಟ್ ನಲ್ಲಿದೆ. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು. ಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇವೆಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.