ಕರಾಳ ಭಾನುವಾರ: ಕರ್ನಾಟಕದಲ್ಲಿ ಪ್ರತ್ಯೇಕ ಅಪಘಾತದಲ್ಲಿ ಅಜ್ಜಿ-ಮೊಮ್ಮಗ ಸೇರಿ ಐವರ ದುರ್ಮರಣ
KSRTC ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಅಜ್ಜಿ-ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀಲಾ (49), ತಮ್ಸೀರ್(4) ಮೃತ ದುರ್ದೈವಿಗಳು.

ಗದಗ/ದಕ್ಷಿಣ ಕನ್ನಡ: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಐವರು ದಾರುಣ ಸಾವನ್ನಪ್ಪಿದ್ದಾರೆ. ಗದಗದ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ. ಮೃತರನ್ನು ನಿಂಗಪ್ಪ ಮಾದರ, ಯಮನಪ್ಪ ಮತ್ತು ಮಂಜುನಾಥಗೌಡ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮತ್ತೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಜಲ್ಪಡ್ಪು ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಅಜ್ಜಿ-ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀಲಾ (49), ತಮ್ಸೀರ್(4) ಮೃತ ದುರ್ದೈವಿಗಳು. ಆಟೋ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



