ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಮಾರ್ಚ್ 7ಕ್ಕೆ ಬಜೆಟ್ ಮಂಡನೆ
ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬೆಂಗಳೂರು: ನಾಳೆ ಸೋಮವಾರದಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.21ರ ತನಕ ನಡೆಯಲಿದೆ.
ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.
ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದ್ದಾರೆ.
ರ್ಯಾಂಪ್ ವ್ಯವಸ್ಥೆ
ಈ ನಡುವೆ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್ ಸಿದ್ದಗೊಳ್ಳುತ್ತಿದೆ. ಕಳೆದ ಅನೇಕ ದಿನಗಳಿಂದ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿದ್ದಾರೆ. ವೈದ್ಯರು ಆರು ವಾರಗಳ ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಅವರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ.
ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ 16 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸಿದ್ದರಾಮಯ್ಯನವರು ಈ ಬಾರಿ ಕುಳಿತುಕೊಂಡು ಬಜೆಟ್ ಪ್ರತಿ ಓದುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



