ಸಿ.ಟಿ ರವಿ-ಹೆಬ್ಬಾಳ್ಕರ್ ಪ್ರಕರಣ 'ಎಥಿಕ್ಸ್ ಕಮಿಟಿ'ಗೆ ಹಸ್ತಾಂತರ..!
ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಈಗಾಗಲೇ ಅಂತ್ಯ ಆಗಿದೆ. ಬೆಳಗಾವಿಯಲ್ಲೇ ನಾನು ಅದಕ್ಕೆ ರೂಲಿಂಗ್ ಕೊಟ್ಟಿದ್ದೆ. ಆದರೆ, ಇಬ್ಬರೂ ಮತ್ತೆ ದೂರು ಕೊಟ್ಟಿದ್ದಾರೆ.

ಬೆಂಗಳೂರು: ಸಿ.ಟಿ.ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಪ್ರಕರಣವನ್ನು ವಿಧಾನ ಪರಿಷತ್‌ನ ಎಥಿಕ್ಸ್ ಕಮಿಟಿಗೆ ಹಸ್ತಾಂತರಿಸಲಾಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಅವರು ಶನಿವಾರ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಈಗಾಗಲೇ ಅಂತ್ಯ ಆಗಿದೆ. ಬೆಳಗಾವಿಯಲ್ಲೇ ನಾನು ಅದಕ್ಕೆ ರೂಲಿಂಗ್ ಕೊಟ್ಟಿದ್ದೆ. ಆದರೆ, ಇಬ್ಬರೂ ಮತ್ತೆ ದೂರು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರಿಗೂ ಸಂಧಾನ ಮಾಡೋ ಕೆಲಸಕ್ಕೆ ಮುಂದಾಗಿದ್ದೆ. ಆದರೆ, ಇದಕ್ಕೆ ಯಾರು ಒಪ್ಪಿಲ್ಲ. ಹೀಗಾಗಿ ಪ್ರಕರಣವನ್ನ ಎಥಿಕ್ಸ್ ಕಮಿಟಿಗೆ ನೀಡಿದ್ದೇನೆಂದು ಹೇಳಿದರು.
ಎಥಿಕ್ಸ್ ಕಮಿಟಿ ವರದಿ ಕೊಟ್ಟ ಮೇಲೆ ಮುಂದಿನ ತೀರ್ಮಾನ ಮಾಡುತ್ತೇನೆ. ಒಂದು ತಿಂಗಳಲ್ಲಿ ವರದಿ ಕೊಡಲು ಹೇಳಿದ್ದೇನೆ. ಈ ವಿಷಯ ಸದನದಲ್ಲಿ ಚರ್ಚೆ ಆಗುವುದಿಲ್ಲ. ಎಥಿಕ್ಸ್ ಕಮಿಟಿಯಲ್ಲಿ ಸಿ.ಟಿ ರವಿ ಇದ್ದರೂ, ಈಗ ಅವರದ್ದೇ ಕೇಸ್ ಬಂದಿರುವುದರಿಂದ ಅವರನ್ನು ಎಥಿಕ್ಸ್ ಕಮಿಟಿಯಿಂದ ಕೈ ಬಿಡಲಾಗಿದೆ ಎಂದು ತಿಳಿಸಿದರು.
ಸದನದಲ್ಲಿ ಮುಗಿದದ್ದನ್ನ ಅಲ್ಲೇ ಮುಗಿಸಬೇಕಿತ್ತು. ಸದನ ನಡೆದಾಗ ನಡೆದಿದ್ದರೆ ಹೀಗೆ ಆಗುತ್ತಿರಲಿಲ್ಲ. ಸದನ ನಡಯದೇ ಇದ್ದಾಗ ಇದು ನಡೆದಿರೋದಕ್ಕೆ ಇಷ್ಟು ದೊಡ್ಡದು ಆಗಿದೆ. ಹೀಗಾಗಿ ಎಥಿಕ್ಸ್ ಕಮಿಟಿಗೆ ಕೊಡಲಾಗಿದೆ. ಎಥಿಕ್ಸ್ ಕಮಿಟಿ ವರದಿ ಕೊಡಲಿ ನೋಡೋಣ. ಎಥಿಕ್ಸ್ ಕಮಿಟಿಯಲ್ಲಿಯೇ ಶೇ,99ರಷ್ಟು ಸಮಸ್ಯೆ ಪರಿಹಾರ ಆಗುವ ವಿಶ್ವಾಸ ಇದೆ. ಇಲ್ಲದೇ ಹೋದರೆ ಎಥಿಕ್ಸ್ ಕಮಿಟಿ ವರದಿಯನ್ನು ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಾಚ್ಯ ಶಬ್ದ ಬಳಕೆ ಆರೋಪ: ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


