ಶಿವಮೊಗ್ಗ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್‌ಗೆ ತಡೆ: ಶ್ರೀರಾಮ ಸೇನೆ ತೀವ್ರ ಖಂಡನೆ
ಬೆಳಗಾವಿ ಪೊಲೀಸರ ಈ ಕ್ರಮವನ್ನು ಖಂಡಿಸಿ ಬೆಳಗಾವಿ ಉಪ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ: ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ತಡೆದ ಪೊಲೀಸರ ಕ್ರಮವನ್ನು ಶ್ರೀರಾಮಸೇನೆ ತೀವ್ರವಾಗಿ ಖಂಡಿಸಿದೆ.
ಬೆಳಗಾವಿ ಪೊಲೀಸರ ಈ ಕ್ರಮವನ್ನು ಖಂಡಿಸಿ ಬೆಳಗಾವಿ ಉಪ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಈ ಕ್ರಮ ಸಾಂವಿಧಾನಿಕ ಹಕ್ಕುಗಳು, ಪ್ರಜಾಪ್ರಭುತ್ವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದು ಟೀಕಿಸಿದರು.
ಸಂಘಟನೆಯ ಸದಸ್ಯ ರವಿಕುಮಾರ್ ಕೋಕಿಟ್ಕರ್ ಅವರು ಮಾತನಾಡಿ, ರಾಷ್ಟ್ರೀಯವಾದಿ ಮತ್ತು ಧಾರ್ಮಿಕ ನಾಯಕ ಮುತಾಲಿಕ್ ಅವರು ತಮ್ಮ ಜೀವನದ 50 ವರ್ಷಗಳಿಗೂ ಹೆಚ್ಚು ಕಾಲ ರಾಷ್ಟ್ರ ಮತ್ತು ಹಿಂದೂ ಧರ್ಮದ ಸೇವೆಗೆ ಮೀಸಲಿಟ್ಟಿದ್ದಾರೆ. ಸರಿಯಾದ ಕಾರಣಗಳಿಲ್ಲದೆ ಅವರ ಮೇಲೆ ನಿರಂತರವಾಗಿ ಜಿಲ್ಲಾ ಪ್ರವೇಶ ನಿಷೇಧ ಹೇರಿರುವುದು ಸರಿಯಲ್ಲ. ಈ ಮೂಲಕ ಮುತಾಲಿಕ್ ಅವರಿಗೆ ಪ್ರಜಾಪ್ರಭುತ್ವ ವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಶಾಂತಿ ಕಾಪಾಡಲು ಬದಲವಾದ ಕ್ರಮ ಕೈಗೊಳ್ಳುವ ಬದಲು, ಸರ್ಕಾರ ಹಳೆ ಪ್ರಕರಣನ್ನು ಕೆದಕಿ ಹಿಂದೂ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಉದಯಗಿರಿ ಗಲಭೆ ಪ್ರಕರಣ: ಸತೀಶ್ ಗಡಿಪಾರು ಮಾಡಿದ್ರೆ ಸಹಿಸೋದಿಲ್ಲ; ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


