ರಾಜ್ಯ

ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವತಿಯನ್ನು ಐಶ್ವರ್ಯಾ ಮಹೇಶ್ ಲೋಹಾರ(18) ಎಂದು ಗುರುತಿಸಲಾಗಿದೆ.

ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ
ಐಶ್ವರ್ಯಾ- ಪ್ರಶಾಂತ್
Published On :

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಿಸಿಯ ಕತ್ತು ಸೀಳೆ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವತಿಯನ್ನು ಐಶ್ವರ್ಯಾ ಮಹೇಶ್ ಲೋಹಾರ(18) ಎಂದು ಗುರುತಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರನನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಎಂದು ಗುರುತಿಸಲಾಗಿದೆ.

ಐಶ್ವರ್ಯಾ ಹಾಗೂ ಪ್ರಶಾಂತ್ ಇಬ್ಬರೂ ಇಂದು ಸಂಜೆ 5 ಗಂಟೆಗೆ ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಬಂದಿದ್ದರು. ಈ ವೇಳೆ ಇಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಪ್ರಶಾಂತ್​ ಏಕಾಏಕಿ ಚಾಕುವಿನಿಂದ ಪ್ರೇಯಸಿ ಐಶ್ವರ್ಯಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡು ಪ್ರಶಾಂತ್ ಪ್ರಾಣ ಬಿಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಅವರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಐಶ್ವರ್ಯಾ ಹಾಗೂ ಪ್ರಶಾಂತ್ ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.