ಮಂಗಳೂರು ಪಿಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ಪತ್ತೆಗೆ ಏಳು ಪೊಲೀಸ್ ತಂಡ ರಚನೆ
ದಿಗಂತ್ ಎಂಬ ಪಿಯುಸಿ ವಿದ್ಯಾರ್ಥಿ ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದು, ಈ ವಿಚಾರವನ್ನು ಬುಧವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಪ್ರಸ್ತಾಪಿಸಿದರು.

ಬೆಂಗಳೂರು: ಮಂಗಳೂರಿನಲ್ಲಿ ಕಾಣೆಯಾದ 17 ವರ್ಷದ ವಿದ್ಯಾರ್ಥಿ ಪತ್ತೆಗಾಗಿ ರಾಜ್ಯ ಸರ್ಕಾರ ಏಳು ಪೊಲೀಸ್ ತಂಡಗಳನ್ನು ರಚಿಸಿದೆ.
ದಿಗಂತ್ ಎಂಬ ಪಿಯುಸಿ ವಿದ್ಯಾರ್ಥಿ ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದು, ಈ ವಿಚಾರವನ್ನು ಬುಧವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರಸ್ತಾಪಿಸಿದರು.
ನಾಪತ್ತೆ ಪ್ರಕರಣದ ತನಿಖೆಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಿದರು. ಇದಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರ ಪರವಾಗಿ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ದಿಗಂತ್ ದ್ವಿತೀಯ ಪಿಯುಸಿ ಓದುತ್ತಿದ್ದಾರೆ ಎಂದು ಸದನಕ್ಕೆ ತಿಳಿಸಿದರು.
ಫೆಬ್ರವರಿ 25 ರಂದು, ತನ್ನ ಹಾಲ್ ಟಿಕೆಟ್ ಪಡೆಯಲು ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿ, ನಂತರ ಮನೆಗೆ ಮರಳಿಲ್ಲ. ತನ್ನ ಕುಟುಂಬ ಸದಸ್ಯರಿಗೆ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ದಿಗಂತ್ ತಿಳಿಸಿದ್ದರು. ಅಂದಿನಿಂದ ವಿದ್ಯಾರ್ಥಿ ಕಾಣೆಯಾಗಿದ್ದು, ಪೊಲೀಸರಿಗೆ ಆತನ ಮೊಬೈಲ್ ಫೋನ್ ಸಿಕ್ಕಿದೆ. ಆದರೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದರು.
ಮಂಗಳೂರು ಜಿಲ್ಲೆಯ ಬಂಟ್ವಾಳ ಬಳಿಯ ಫರಂಗಿಪೇಟೆ ಪಟ್ಟಣದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆಯಾಗಿ ವಾರ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರ "ನಿಷ್ಕ್ರಿಯತೆ" ಖಂಡಿಸಿ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ಶನಿವಾರ ಫರಂಗಿಪೇಟೆ ಬಂದ್ ಮಾಡಿ, ಪ್ರತಿಭಟನೆ ನಡೆಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



