ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್​ ಮೂರು ದಿನ ಡಿಆರ್​ಐ ಕಸ್ಟಡಿಗೆ ನೀಡಿದ ಕೋರ್ಟ್

ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಅವರು, ನಟಿಯನ್ನು ಮಾರ್ಚ್ 9 ರಿಂದ ಮಾರ್ಚ್ 11ರ ವರೆಗೆ ಡಿಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್​ ಮೂರು ದಿನ ಡಿಆರ್​ಐ ಕಸ್ಟಡಿಗೆ ನೀಡಿದ ಕೋರ್ಟ್
ನಟಿ ರನ್ಯಾ ರಾವ್
Published On :

ಬೆಂಗಳೂರು: 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಡಿಆರ್​ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.

ಡಿಆರ್​ಐ ಅಧಿಕಾರಿಗಳು ಆರೋಪಿ ನಟಿಯನ್ನು ಹೆಚ್ಚಿನ ವಿಚಾರಣೆಗಾಗಿ ತನ್ನ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ನ್ಯಾಯಾಲಯದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ತೀರ್ಪು ಕಾಯ್ದಿರಿಸಿದ್ದರು.

ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಅವರು, ನಟಿಯನ್ನು ಮಾರ್ಚ್ 9 ರಿಂದ ಮಾರ್ಚ್ 11ರ ವರೆಗೆ ಡಿಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

ನಟಿ ರನ್ಯಾ ರಾವ್ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಕಳೆದ ಒಂದು ವರ್ಷದಲ್ಲಿ ಸೌದಿ ನಗರಕ್ಕೆ 30 ಬಾರಿ ಪ್ರಯಾಣಿಸಿದ್ದಾರೆ. ಪ್ರತಿ ಪ್ರವಾಸದಲ್ಲೂ ಅವರು ಚಿನ್ನವನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.