ರಾಜ್ಯ

ಗೃಹಲಕ್ಷ್ಮಿ ಯೋಜನೆ ಅಕ್ಕ ಕೋ-ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ: ಬಜೆಟ್ ನಲ್ಲಿ ಸಿಎಂ ಘೋಷಣೆ

ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಅಕ್ಕ ಕೋ-ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ: ಬಜೆಟ್ ನಲ್ಲಿ ಸಿಎಂ ಘೋಷಣೆ
ಗೃಹಲಕ್ಷ್ಮಿ ಯೋಜನೆ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್​​ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಜನಪ್ರಿಯವಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿಗಳನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ.

ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಅಕ್ಕ ಕೋ ಆಪರೇಟಿವ್ ವ್ಯಾಪ್ತಿಗೆ

ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂ ನೀಡಲಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇವೆರಡು ಯೋಜನೆಗಳು ಮುಖ್ಯವಾಗಿದ್ದು ಹೆಚ್ಚಿನ ಅನುದಾನ ಬೇಡುತ್ತವೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟೀನ್​ಗಳನ್ನು ತೆರೆಯಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.