Bengaluru University ಮರುನಾಮಕರಣ: ಇನ್ನು ಮುಂದೆ Dr. Manmohan Singh ವಿಶ್ವವಿದ್ಯಾಲಯ- ಸಿಎಂ ಸಿದ್ದರಾಮಯ್ಯ ಘೋಷಣೆ
ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ | ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು ವಿಶ್ವವಿದ್ಯಾಯಲಕ್ಕೆ ಮರುನಾಮಕರಣವನ್ನು ಘೋಷಿಸಿದ್ದಾರೆ.
ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ.
ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ 4 ವರ್ಷಗಳಲ್ಲಿ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



