ರಾಜ್ಯ ಬಜೆಟ್ 2025: 5 ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ ಅನುದಾನ ಮೀಸಲು
ಸರ್ಕಾರ ಜನಪ್ರಿಯ ಯೋಜನೆಯಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವ ನಿಧಿ ಗ್ಯಾರಂಟಿಗಳಿಂದ ಸಾಕಷ್ಟು ಜನ ತಿಂಗಳಿಗೆ ಸಹಾಯಧನ ಪಡೆಯುತ್ತಿದ್ದಾರೆ.

ಬೆಂಗಳೂರು: 2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ 16ನೇ ಬಾರಿ 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿದರು.
ಸಮಾಜದಲ್ಲಿ ಬಡವರ ನೋವನ್ನು ನಿವಾರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ, ಅವು ಜನತೆಗೆ "ಉಚಿತ ಉಡುಗೊರೆಗಳಲ್ಲ" ಎಂದರು. ಇದೇ ವೇಳೆ ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂ. ಒದಗಿಸಲಾಗಿದೆ. ಕಳೆದ ಎರಡು ಆಯವ್ಯಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದರ ಜೊತೆಗೆ ವಿತ್ತೀಯ ಕೊರತೆಯನ್ನು ಜಿ.ಎಸ್.ಡಿ.ಪಿ. ಯ ಶೇ.3ರ ಮಿತಿಯೊಳಗೆ ಮತ್ತು ಒಟ್ಟು ಹೊಣೆಗಾರಿಕೆಯನ್ನು ಜಿ.ಎಸ್.ಡಿ.ಪಿ.ಯ ಶೇ.25ರ ಮಿತಿಯೊಳಗೆ ನಿಯಂತ್ರಿಸುವ ಮೂಲಕ ವಿತ್ತೀಯ ಶಿಸ್ತನ್ನು ಪಾಲಿಸಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗೆ 5,300 ಕೋಟಿ ರೂ. ಅನುದಾನ, ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ, ಗೃಹಲಕ್ಷ್ಮೀ ಯೋಜನೆಗೆ 28 ಸಾವಿರ ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ.
ಸರ್ಕಾರ ಜನಪ್ರಿಯ ಯೋಜನೆಯಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವ ನಿಧಿ ಗ್ಯಾರಂಟಿಗಳಿಂದ ಸಾಕಷ್ಟು ಜನ ತಿಂಗಳಿಗೆ ಸಹಾಯಧನ ಪಡೆಯುತ್ತಿದ್ದಾರೆ.

ರಾಜ್ಯ ಬಜೆಟ್ 2025: ಹಸಿರು ಸಾರ್ವಜನಿಕ ಸಾರಿಗೆಯತ್ತ ಫೋಕಸ್; ಬೆಂಗಳೂರಿಗೆ ಸಿಗಲಿದೆ 9,000 ಹೊಸ ಎಲೆಕ್ಟ್ರಿಕ್ ಬಸ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


