ರಾಜ್ಯ

ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಕೆ!

ಇದು ಕರ್ನಾಟಕದ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಕೆ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಮೂರು ಜಾಗಗಳನ್ನು ಪ್ರಸ್ತಾಪಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಶುಕ್ರವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಎಂಬಿ ಪಾಟೀಲ್, ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಕೇಂದ್ರಕ್ಕೆ ಪ್ರಸ್ತಾಪಿಸಲಾಗಿದೆ. ಕನಕಪುರ ರಸ್ತೆ ಹಾರೋಹಳ್ಳಿ ಬಳಿ ಎರಡು ಕಡೆ ಹಾಗೂ ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಕಡೆ ಸ್ಥಳ ಗುರುತಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದು ಕರ್ನಾಟಕದ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.

2030 ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಾಮರ್ಥ್ಯ 100 ಮಿಲಿಯನ್ ಸಾಮರ್ಥ್ಯವನ್ನು ತಲುಪಲಿದೆ. ಒಳ್ಳೆಯ ಉದ್ದೇಶದಿಂದ ಆರಂಭಿಕ ಸಿದ್ಧತೆಗಳನ್ನು ಪ್ರಾರಂಭಿಸಿದ್ದೇವೆ. ಈಗ ಅದನ್ನು ಆರಂಭಿಸಿದರೆ ಏಳೆಂಟು ವರ್ಷಗಳು ಬೇಕಾಗುತ್ತದೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.