ಹಾಸ್ಟೆಲ್‌ಗಳಲ್ಲಿ SC/ST ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು
ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆಯಲ್ಲಿ ಒಟ್ಟು 270 ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಿವೆ, 2024-25ನೇ ಸಾಲಿನಲ್ಲಿ 29,867 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದ್ದು, ಒಟ್ಟಾರೆ 23,939 ಮಂಜೂರಾತಿ ಸಂಖ್ಯೆ ಪೈಕಿ 5,929 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪ್ರವೇಶ ಕಲ್ಪಿಸಲಾಗಿದೆ.

ಬೆಂಗಳೂರು: ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಿಗೆ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವ ಎನ್.ಎಸ್. ಬೋಸರಾಜು ಅವರು ಗುರುವಾರ ಹೇಳಿದರು.
ಪರಿಷತ್ತಿನಲ್ಲಿ ಎಂಎಲ್‌ಸಿ ಡಿಟಿ ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆಯಲ್ಲಿ ಒಟ್ಟು 270 ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಿವೆ, 2024-25ನೇ ಸಾಲಿನಲ್ಲಿ 29,867 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದ್ದು, ಒಟ್ಟಾರೆ 23,939 ಮಂಜೂರಾತಿ ಸಂಖ್ಯೆ ಪೈಕಿ 5,929 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪ್ರವೇಶ ಕಲ್ಪಿಸಲಾಗಿದೆ ಎಂದು ಹೇಳಿದರು.
2024-2025ನೇ ಸಾಲಿನ ಬಜೆಟ್ ಘೋಷಣೆಯಂತೆ, ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಆಹಾರ ವೆಚ್ಚದ ದರವನ್ನು 100 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಭೋಜನಾ ವೆಚ್ಚ ಮೊದಲು ಮಾಸಿಕ ಒಂದು ವಿದ್ಯಾರ್ಥಿಗೆ 1,750 ರೂ. ಕೊಡಲಾಗುತ್ತಿತ್ತು. ಈಗ ಅದನ್ನ 100 ರೂ.ಗೆ ಹೆಚ್ಚಳ ಮಾಡಲಾಗಿದ್ದು, 1,850 ರೂಪಾಯಿ ಕೊಡಲಾಗುತ್ತಿದೆ. ಹೆಚ್ಚುವರಿಯಾಗಿ ಭೋಜನ ವೆಚ್ಚ ಕೊಡುವ ಬಗ್ಗೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



