ರಾಜ್ಯ

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಸರ್ಕಾರ ಶಾಕ್: ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧಾರ, ಈ ವರ್ಷವೂ ಎಣ್ಣೆ ದುಬಾರಿ

ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ ಎಂದು ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಸರ್ಕಾರ ಶಾಕ್: ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧಾರ, ಈ ವರ್ಷವೂ ಎಣ್ಣೆ ದುಬಾರಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯದ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಗುರಿ ನಿಗದಿ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಾಗಲಿದೆ.

ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ ಎಂದು ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಪ್ರೀಮಿಯಂ ಮಧ್ಯದ ಬೆಲೆಗಳನ್ನು ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸಿದೆ. 2025-26ರಲ್ಲಿಯೂ ಅಬಕಾರಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು. ಜೊತೆಗೆ ಮದ್ಯ ಮಾರಾಟವನ್ನು ಹೆಚ್ಚಿಸಲು ಖಾಲಿ ಇರುವ ಅಥವಾ ಲಭ್ಯವಿರುವ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್​ ಹರಾಜಿನ ಮೂಲಕ ಹಂಚಿಕೆ ಮಾಡಲಾಗುವುದು. ಇದರಿಂದ ಹೆಚ್ಚುವರಿ ಆದಾಯವನ್ನು ಸಂಗ್ರಹಣೆ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ತಂತ್ರಾಂಶವನ್ನು ರೂಪಿಸಲಾಗುವುದು. ಇದರಿಂದ ಆಡಳಿತದಲ್ಲಿ ದಕ್ಷತೆ ಹೆಚ್ಚಲಿದೆ. ಸಾರ್ವಜನಿಕ ಸೇವೆ ಸುಧಾರಿಸಲಿದೆ ಎಂದು ತಿಳಿಸಿದರು.

2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂಪಾಯಿಗಳ ರಾಜಸ್ವವನ್ನು ನಿರೀಕ್ಷಿಸಲಾಗಿದೆ. 2025-26ನೇ ಸಾಲಿಗೆ 40,000 ಕೋಟಿ ರೂಪಾಯಿಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.