ರಾಜ್ಯ

ಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಬಂಧನ

ಮಾರ್ಚ್ 6 ರಂದು ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

ಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಬಂಧನ
ಸಾಂದರ್ಭಿಕ ಚಿತ್ರ
Published On :

ಕೊಪ್ಪಳ: ಹಂಪಿ ಸಮೀಪ ಇತ್ತೀಚೆಗೆ ನಡೆದಿದ್ದ ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾನುವಾರ ತಿಳಿಸಿದ್ದಾರೆ.

ಮಾರ್ಚ್ 6 ರಂದು ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಆಪರೇಟರ್ ಮೇಲೆ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

ಅಲ್ಲದೆ ಈ ವೇಳೆ ಸ್ಥಳದಲ್ಲಿದ್ದ ಇತರೆ ಮೂರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು. ಈ ಪೈಕಿ ನಾಪತ್ತೆಯಾಗಿದ್ದ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒರಿಸ್ಸಾ ಮೂಲದ ಬಿಬಷ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದರು.

ಈ ಪೈಶಾಚಿಕ ಕೃತ್ಯದಲ್ಲಿ ಮೂವರು ವ್ಯಕ್ತಿಗಳು ಭಾಗಿಯಾಗಿದ್ದು, ಮಾರ್ಚ್ 8 ರಂದು ಇಬ್ಬರನ್ನು ಬಂಧಿಸಿದರೆ, ಮೂರನೇ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಪ್ರವಾಸಿಗರಿಗೆ ಭದ್ರತೆ ಹೆಚ್ಚಿಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಶಿವರಾಜ ತಂಗಡಗಿ ತಿಳಿಸಿದರು.

ಅಪರಾಧದ ನಂತರ ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.