ಹಾಸನದಲ್ಲಿ ಕಟ್ಟಡ ದುರಂತ: ಪಾಳು ಬಿದ್ದ ಕಟ್ಟಡ ಕುಸಿದು ಮೂವರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ!
ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ: ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ. ಇನ್ನು ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಸಹ ಗಂಭೀರಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಸತ್ಯನಾರಾಯಣ ಎಂಬುವರಿಗೆ ಸೇರಿದ್ದ ಎಂಟು ಅಂಗಡಿಗಳಿದ್ದ ಹಳೆಯ ಕಟ್ಟಡ ಇದಾಗಿದ್ದು ಇದರಲ್ಲಿ ಅಂಗಡಿಗುತ್ತಿತ್ತು. ಹೀಗಾಗಿ ನಜೀರ್ ಹಾಗೂ ಅಮರನಾಥ್ ಹಣ್ಣು ಖರೀದಿ ಮಾಡಲು ಬಂದಿದ್ದಾರೆ. ಈ ವೇಳೆ ಕಟ್ಟಡದ ಸಬ್ಜಾ ಕುಸಿದುಬಿದ್ದಿದೆ. ಇನ್ನು ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತದಲ್ಲಿ ಐವರು ಸಾವು; ಚಿಕ್ಕಬಳ್ಳಾಪುರದಲ್ಲಿ ಕಾರು ಹೊತ್ತಿ ಉರಿದು ಇಬ್ಬರು ಸಜೀವ ದಹನ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


