ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ; ಉದ್ಯಮಿ ಪುತ್ರನ ಬಂಧನ
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಕರಣ ಸಂಬಂಧ ಡಿಆರ್ ಐ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಹೀಗಾಗಿ ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.
ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ.
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



