ಲೋಕ ಅದಾಲತ್: ವಿಚ್ಛೇದನ ಅರ್ಜಿ ಹಿಂಪಡೆದು 5 ವರ್ಷಗಳ ಬಳಿಕ ಒಂದಾದ ದಂಪತಿ
ಭಾಗೀರಥಿ ಪರವಾಗಿ ವಕೀಲ ನಂಜಯ್ಯ ಹಾಗೂ ಅನಿಲ್ ರಾಜ್ ಪರ ವಕೀಲ ಸಿದ್ದರಾಜು ವಾದ ಮಂಡಿಸಿದ್ದರು. ಎರಡು ಕಡೆಯ ವಕೀಲರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ದಂಪತಿ ಒಂದಾದರು.

ಮೈಸೂರು: ಐದು ವರ್ಷಗಳ ಹಿಂದೆ ಚಾಮರಾಜನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ಕಾರಣಗಳಿಂದ ಬೇರ್ಪಟ್ಟ ದಂಪತಿಗಳು ವಿಚ್ಛೇದನದ ಯೋಜನೆಯನ್ನು ಕೈಬಿಟ್ಟಿದ್ದಾರೆ.
ಗುಂಡ್ಲುಪೇಟೆಯ ಅನಿಲ್ ರಾಜ್ ಹಾಗೂ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಭಾಗೀರಥಿ ದಂಪತಿ ಜೀವನಾಂಶ, ವಿವಾಹ ವಿಚ್ಛೇದನಕ್ಕಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಕಳೆದ 5 ವರ್ಷಗಳಿಂದಲೂ ಪ್ರಕರಣ ನಡೆಯುತ್ತಿತ್ತು. ಲೋಕ ಅದಾಲತ್‍ನಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಿಕೊಂಡಿದ್ದು ಮತ್ತೆ ಒಂದಾದರು.
ಭಾಗೀರಥಿ ಪರವಾಗಿ ವಕೀಲ ನಂಜಯ್ಯ ಹಾಗೂ ಅನಿಲ್ ರಾಜ್ ಪರ ವಕೀಲ ಸಿದ್ದರಾಜು ವಾದ ಮಂಡಿಸಿದ್ದರು. ಎರಡು ಕಡೆಯ ವಕೀಲರ ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ದಂಪತಿ ಒಂದಾದರು.
ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಿ.ಎಸ್. ಭಾರತಿ ಮತ್ತು ಇತರರ ಅಧ್ಯಕ್ಷತೆಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಇಬ್ಬರು ರಾಜಿ ಮಾಡಿಕೊಂಡರು. ಇನ್ನು ಮುಂದೆ ಅವರು ಹಳೇಯದ್ದನ್ನೆಲ್ಲಾ ಮರೆತು ಶಾಂತಿಯುತ ಜೀವನ ನಡೆಸಲು ನಿರ್ಧರಿಸಿದರು.
ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ನ್ಯಾಯಾಲಯಗಳಲ್ಲಿ ಬಾಕಿ ಇರುವ ಅನೇಕ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡವು, ಇದರಲ್ಲಿ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಅಪಘಾತ ಪರಿಹಾರ, ಭೂ ಸ್ವಾಧೀನ ಮತ್ತು ಕಾರ್ಮಿಕ ಸಮಸ್ಯೆಗಳು ಸೇರಿದಂತೆ ಅನೇಕ ಪ್ರಕರಣಗಳು ಬಗೆಹರಿದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



