ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಬಿಜೆಪಿ ನಾಯಕಿ ಆತ್ಮಹತ್ಯೆ!
ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳ ಎಂಬುವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ ಮಂಜುಳಾ

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳ ಎಂಬುವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ ಮಂಜುಳಾ ಅವರು ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



