ರಾಜ್ಯ

ಸಿಎಂ ಸಿದ್ದರಾಮಯ್ಯ ಜೊತೆಗೆ ರನ್ಯಾ ರಾವ್: ಫೋಟೋ ಹಂಚಿಕೊಂಡ ಅಮಿತ್ ಮಾಳವಿಯಾ

"ಕಾಂಗ್ರೆಸ್ ಗೋಲ್ಡ್ ಫೀಲ್ಡ್" ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಫೋಟೋ ಹಂಚಿಕೊಂಡಿರುವ ಮಾಳವಿಯಾ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಬಾಗಿಲು ತಲುಪಿದೆ.

ಸಿಎಂ ಸಿದ್ದರಾಮಯ್ಯ ಜೊತೆಗೆ ರನ್ಯಾ ರಾವ್: ಫೋಟೋ ಹಂಚಿಕೊಂಡ ಅಮಿತ್ ಮಾಳವಿಯಾ
ರನ್ಯಾ ರಾವ್ ಜೊತೆಗೆ ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರನ್ಯಾ ರಾವ್, ಸಿಎಂ ಸಿದ್ದರಾಮಯ್ಯ ಜೊತೆಗಿರುವ ಫೋಟೋವೊಂದನ್ನು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ಈ ಪ್ರಕರಣ ಈಗ ಸಿಎಂ ಮನೆಬಾಗಿಲು ತಲುಪಿದೆ ಎಂದು ಹೇಳಿದ್ದಾರೆ.

"ಕಾಂಗ್ರೆಸ್ ಗೋಲ್ಡ್ ಫೀಲ್ಡ್" ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಫೋಟೋ ಹಂಚಿಕೊಂಡಿರುವ ಮಾಳವಿಯಾ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಬಾಗಿಲು ತಲುಪಿದೆ. ಈ ದಿನಾಂಕದ ಫೋಟೋದಲ್ಲಿ ಗೃಹ ಸಚಿವ ಜಿ ಪರಮೇಶ್ವರ ಕೂಡ ಇದ್ದಾರೆ ಎಂದಿದ್ದಾರೆ.

ಇಂತಹ ರಾಜಕೀಯ ಲಿಂಕ್‌ಗಳನ್ನು ಬಿಡುತ್ತಿರುವ ವ್ಯಕ್ತಿ ಬೇರೆ ಯಾರೂ ಅಲ್ಲ, ಸಿಎಂ ಹುದ್ದೆಗಾಗಿ ಕಾಯುತ್ತಿರುವ ಡಿಕೆ ಶಿವಕುಮಾರ್ ಎಂದಿದ್ದಾರೆ.

ಮಂಗಳವಾರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು ರಾಜ್ಯ ಸರ್ಕಾರದಿಂದ ಯಾರೂ ಈ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.