ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಮನೆ ಸೇರಿ ಬೆಂಗಳೂರಿನ ಹಲವೆಡೆ ಇಡಿ ದಾಳಿ, ಪರಿಶೀಲನೆ
ಗೋಲ್ಡ್ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ.

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಟಿ ರನ್ಯಾ ರಾವ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಇಸಿಐಆರ್ ಎಂದರೆ ಎನ್ಫೋರ್ಸ್ಮೆಂಟ್ ಕೇಸ್ ಇನ್ಫಾರ್ಮೇಷನ್ ರಿಪೋರ್ಟ್. ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಕೇಸ್ ದಾಖಲಾಗಿದೆ.
ನಟಿ ರನ್ಯಾ ರಾವ್ ಅವರ ಫ್ಲ್ಯಾಟ್, ಉದ್ಯಮಿ ತರುಣ್ ರಾಜ್ ಅವರ ಮನೆ, ಆರ್ಟಿ ನಗರದಲ್ಲಿರುವ ಜ್ಯೋತಿಷಿ ಕಚೇರಿ, ಪೊಲೀಸ್ ಅಧಿಕಾರಿಗಳು ಹಾಗೂ ಕಸ್ಟಮ್ಸ್ ಅಧಿಕಾರಿಗಳ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದಾರೆ.
ಗೋಲ್ಡ್ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾವಾಲಾ ದಂಧೆ ಮೂಲಕ ಭಾರತದಿಂದ ಹಣ ದುಬೈಗೆ ಹೋಗುತ್ತಿತ್ತು. ಬಳಿಕ ಚಿನ್ನದ ಗಟ್ಟಿ ರೂಪದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ವಿಮಾನ ನಿಲ್ದಾಣದ ಭದ್ರತೆ ಮತ್ತು ಕಸ್ಟಮ್ಸ್ ಕಾರ್ಯವಿಧಾನಗಳಲ್ಲಿನ ಸಂಭಾವ್ಯ ಲೋಪಗಳು ಅಥವಾ ಒಪ್ಪಂದದ ಬಗ್ಗೆಯೂ ಏಜೆನ್ಸಿಗಳು ತನಿಖೆ ನಡೆಸುತ್ತಿವೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ರನ್ಯಾ ರಾವ್ ಅವರನ್ನು ಬಂಧಿಸಿದ ನಂತರ ಮಾರ್ಚ್ 4 ರಂದು ಈ ದಾಳಿಗಳು ನಡೆದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



