ಬಾಗಲಕೋಟೆ: ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕಾರ; 6 ಪೊಲೀಸರ ಎತ್ತಂಗಡಿ!
ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

ಬಾಗಲಕೋಟೆ: ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ. ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್ಐ ಡಿಜೆ ಶಿವಪುರ, ಎಎಸ್ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ವರ್ಗಾವಣೆಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



