ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ಹೈಕೋರ್ಟ್ ತಡೆ

ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ.

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್:‌ ಸಮನ್ಸ್‌ ಗೆ ಹೈಕೋರ್ಟ್ ತಡೆ
ಬಿಎಸ್ ಯಡಿಯೂರಪ್ಪ — PTI
Published On :

ಬೆಂಗಳೂರು: ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ.

ಇದರ ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.

ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ.

ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್​ನಲ್ಲಿದ್ದ ಸಂಭಾಷಣೆ ಬಿಎಸ್ ​ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.

1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಬಿಎಸ್​ ಯಡಿಯೂರಪ್ಪ ಪರ ವಕೀಲರು ವಾದಿಸಿದರು.

ಬಿಎಸ್​ ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್​​ಗೆ ತಡೆ ನೀಡದಂತೆ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.