ಮೈಸೂರು: ಮತ್ತೊಬ್ಬಳ ಜೊತೆ ತೋಟದ ಮನೆಯಲ್ಲಿದ್ದ ವಿವಾಹಿತ ವ್ಯಕ್ತಿಯ ಬರ್ಬರ ಹತ್ಯೆ
ಮೈಸೂರಿನ ಅನುಗನಹಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಮೃತ ವ್ಯಕ್ತಿಯನ್ನು ಸೂರ್ಯ ಎಂದು ಗುರುತಿಸಲಾಗಿದೆ.

ಮೈಸೂರು: ಮೈಸೂರಿನ ಅನುಗನಹಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಮೃತ ವ್ಯಕ್ತಿಯನ್ನು ಸೂರ್ಯ ಎಂದು ಗುರುತಿಸಲಾಗಿದೆ. ಮದುವೆಯಾಗಿದ್ದರು ಸೂರ್ಯ ಮತ್ತೊಬ್ಬಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಈ ವಿಚಾರ ತಿಳಿದು ಆತನ ಪತ್ನಿ ಮತ್ತು ತಾಯಿ ಮನೆ ಬಿಟ್ಟು ಹೋಗಿದ್ದರು. ಸೂರ್ಯ ಇನ್ ಸ್ಟಾಗ್ರಾಮನಲ್ಲಿ ಶ್ವೇತಾ ಎಂಬಾಕೆಯ ಜೊತೆ ಪರಿಚಯ ಮಾಡಿಕೊಂಡಿದ್ದಾನೆ. ನಂತರ ಅವರು ಒಟ್ಟಾಗಿ ಸುತ್ತುವುದು ಅಲ್ಲದೆ ಖಾಸಗಿ ಫೋಟೋಗಳನ್ನು ಸ್ಟೇಟಸ್ ಗೆ ಹಾಕುತ್ತಿದ್ದರು.
ಮೊದ ಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ನಂತರ ಶ್ವೇತಾ ಆಸ್ತಿಗಾಗಿ ಪೀಡಿಸುತ್ತಿದ್ದಳಂತೆ. ಇನ್ನು ನಿನ್ನೆ ರಾತ್ರಿ ಸಹ ಇಬ್ಬರು ತೋಡದ ಮನೆಯಲ್ಲಿ ಒಟ್ಟಾಗಿ ಇದ್ದರು. ಆದರೆ ಬೆಳಗಾಗುವಷ್ಟರಲ್ಲಿ ಸೂರ್ಯನ ಹತ್ಯೆಯಾಗಿದೆ. ಈ ಕೊಲೆಯನ್ನು ಶ್ವೇತಾಳೆ ಮಾಡಿದ್ದಾಳೆ ಎಂದು ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಜಯಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



