ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ: ಸಿಎಂ ಸಿದ್ದರಾಮಯ್ಯ
ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ.

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪ್ರಶ್ನಿಸಿದ್ದಾರೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಸಂಪುಟದ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



