ಬೆಳಗಾವಿ: ಕಾರಿನ ಮೇಲೆ ಲಾರಿ ಬಿದ್ದು ಇಬ್ಬರಿಗೆ ಗಂಭೀರ ಗಾಯ
ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ.

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಮುಗುಚಿ ಬಿದ್ದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ.
ಕೂಡಲೇ ಸ್ಥಳೀಯರು ರಕ್ಷಣೆ ಧಾವಿಸಿದ್ದಾರೆ. ಕಾರು ಅಪ್ಪಚ್ಚಿಯಾಗಿದ್ದರಿಂದ ಜನರಿಂದ ರಕ್ಷಣೆ ಸಾಧ್ಯವಾಗಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಎರಡು ಕ್ರೇನ್ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್ಗಳನ್ನು ಬಿಡಿ ಬಿಡಿ ಮಾಡಿ, ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.
ಕಾರ್ಯಾಚರಣೆ ನಡೆಸುವುದು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಕ್ರೇನ್ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್ಗಳನ್ನು ಬಿಡಿ ಬಿಡಿ ಮಾಡಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಬೆಳಗಾವಿ ನಗರ ಹೊರವಲಯದ ಕೆಎಲ್ಇ ಆಸ್ಪತ್ರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಸಿಲುಕಿಹಾಕಿಕೊಂಡಿದ್ದವರನ್ನು ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಎಂದು ಗುರುತಿಸಲಾಗಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



