ರಾಜ್ಯ

ಬೆಂಗಳೂರು: ವ್ಯಕ್ತಿಯೋರ್ವನನ್ನು ಮನೆಗೆ ಕರೆಸಿ ಸನ್ಮಾನ ಮಾಡಿ, ಹಿಗ್ಗಾಮುಗ್ಗ ಥಳಿಸಿ, ಅಶ್ಲೀಲ ಪದಗಳಿಂದ ನಿಂದನೆ; ವಿಡಿಯೋ ವೈರಲ್!

ವ್ಯಕ್ತಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಅವಮಾನಿಸಲಾದ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ವ್ಯಕ್ತಿಯೋರ್ವನನ್ನು ಮನೆಗೆ ಕರೆಸಿ ಸನ್ಮಾನ ಮಾಡಿ, ಹಿಗ್ಗಾಮುಗ್ಗ ಥಳಿಸಿ, ಅಶ್ಲೀಲ ಪದಗಳಿಂದ ನಿಂದನೆ; ವಿಡಿಯೋ ವೈರಲ್!
Published On :

ಬೆಂಗಳೂರು: ಹೊಸಕೋಟೆಯಲ್ಲಿ ಲತಾ ಯಾದವ್ ಎಂಬ ಮಹಿಳೆಯ ಮನೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಅವಮಾನಿಸಲಾದ ಘಟನೆ ಬೆಳಕಿಗೆ ಬಂದಿದೆ. ಚಂದನ, ಭರತ್, ಶಿವು ಮತ್ತು ಇತರರು ಸೇರಿದಂತೆ ಆಕೆಯ ಕುಟುಂಬ ಸದಸ್ಯರು ಹಲ್ಲೆಯಲ್ಲಿ ಭಾಗಿಯಾಗಿರುವುದು ವಿಡಿಯೋದಲ್ಲಿ ಕಾಣಸಿಗುತ್ತದೆ. ವ್ಯಕ್ತಿಗೆ ದೈಹಿಕ ಹಿಂಸೆ, ಸಾರ್ವಜನಿಕ ಅವಮಾನ ಮತ್ತು ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಈ ವೀಡಿಯೊದಲ್ಲಿ ಆಘಾತಕಾರಿ ಕ್ರೌರ್ಯ ಪ್ರದರ್ಶನವನ್ನು ತೋರಿಸಲಾಗಿದೆ. ವಿಡಿಯೋದಲ್ಲಿ ಪುರುಷರಿಬ್ಬರು ವ್ಯಕ್ತಿ ಮೇಲೆ ಹಲ್ಲೆ ಮಾಡುತ್ತಿದ್ದರೆ ಮಹಿಳೆ ವಿಡಿಯೋ ಮಾಡುತ್ತಿದ್ದಾರೆ. ಅಲ್ಲದೆ ವ್ಯಕ್ತಿಗೆ ಕೀಳುಮಟ್ಟದ ಪ್ರಶ್ನೆಗಳನ್ನು ಕೇಳುತ್ತಾ ಅಪಹಾಸ್ಯ ಮಾಡಿ ನಿರ್ದಯವಾಗಿ ಥಳಿಸಿದ್ದಾರೆ. ವ್ಯಕ್ತಿ ಅಸಹಾಯಕವಾಗಿ ಕುಳಿತ್ತಿದ್ದಾಗ ದುಷ್ಕರ್ಮಿಗಳು ಆತನಿಗೆ ಶಾಲು ಹೊದೆಸಿ ಸನ್ಮಾನಿಸಿದ್ದಾರೆ. ಆತ ಬಿಟ್ಟುಬಿಡಿ ಎಂದು ಬೇಡಿಕೊಂಡರು ದಾಳಿಕೋರರು ಹಲ್ಲೆಯನ್ನು ಮುಂದುವರೆಸಿದ್ದಾರೆ. ಯಾವ ಕಾರಣಕ್ಕಾಗಿ ಈ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ.

ಹಲ್ಲೆಗೊಳಗಾದ ವ್ಯಕ್ತಿ ಬಡವನಾಗಿದ್ದರಿಂದ ಭಯ ಮತ್ತು ಬೆದರಿಕೆಯಿಂದಾಗಿ ದೂರು ದಾಖಲಿಸಿಲ್ಲ ಎಂದು ವರದಿಯಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಕರ್ನಾಟಕ ರಾಜ್ಯ ಕಾರ್ಮಿಕ ಮಂಡಳಿ ಈ ಕೃತ್ಯವನ್ನು ಬಲವಾಗಿ ಖಂಡಿಸಿದೆ. ಅಲ್ಲದೆ ಹೊಸಕೋಟೆ ಪೊಲೀಸರನ್ನು ಘಟನೆ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಲು ಒತ್ತಾಯಿಸಿದೆ. ಅವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಸಂಪೂರ್ಣ ತನಿಖೆ ನಡೆಸಬೇಕು ಮತ್ತು ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.