ಬೆಳಗಾವಿ ಮೇಯರ್ ಚುನಾವಣೆ: ಮತ್ತೆ ಬಿಜೆಪಿ ಅಧಿಪತ್ಯ; ಮರಾಠಿಗನಿಗೆ ಮೇಯರ್ ಪಟ್ಟ-ಕನ್ನಡತಿಗೆ ಉಪಮೇಯರ್ ಸ್ಥಾನ!
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಸಿದ್ದು ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಆಯ್ಕೆಯಾಗಿದ್ದಾರೆ.

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಸಿದ್ದು ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
41ನೇ ವಾರ್ಡ್ ಸದಸ್ಯರಾಗಿರುವ ಮಂಗೇಶ ಪವಾರ 40 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಆಯ್ಕೆಯಾಗಿದ್ದರೆ, 43ನೇ ವಾರ್ಡಿನ ಸದಸ್ಯೆ ವಾಣಿವಿಲಾಸ ಜೋಶಿ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ರಾಜು ಭಾತಖಾಂಡೆ, ಪಕ್ಷೇತರ ಅಭ್ಯರ್ಥಿ ಬಸವರಾಜ ಮೋದಗೇಕರ್, ಎಐಎಂಐಎಂನ ಶಾಹಿದ್ಖಾನ್ ಪಠಾಣ ನಾಮಪತ್ರ ಸಲ್ಲಿಸಿದರು. ತದನಂತರ ರಾಜು ಭಾತಖಾಂಡೆ ಹಾಗೂ ಶಾಹಿದ್ಖಾನ್ ಪಠಾಣ ತಮ್ಮ ನಾಮಪತ್ರ ಹಿಂಪಡೆದರು.
ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 65 ಮತದಾರ ಪೈಕಿ 60 ಮಂದಿ ಹಾಜರಿದ್ದರು. ಆದರೆ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕ ಆಸಿಫ್ ಸೇಠ್, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಓರ್ವ ಪಾಲಿಕೆ ಸದಸ್ಯ ಗೈರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



