ಚಾಮರಾಜನಗರ: 'ನಿನ್ನ ಜೊತೆ ಹೊರಗೆ ಹೋಗಲು ನಾಚಿಕೆ ಆಗುತ್ತೆ'; ಬೋಳುತಲೆ ಬಗ್ಗೆ ಪತ್ನಿ ಗೇಲಿ, ಮನನೊಂದು ಪತಿ ನೇಣಿಗೆ ಶರಣು!
ಬೋಳು ತಲೆ ಎಂದು ಪದೇ ಪದೇ ಗೇಲಿ ಮಾಡುತ್ತಿದ್ದರಿಂದ ಮನನೊಂದ ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ: ಬೋಳು ತಲೆ ಎಂದು ಪದೇ ಪದೇ ಗೇಲಿ ಮಾಡುತ್ತಿದ್ದರಿಂದ ಮನನೊಂದ ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ಮೃತನನ್ನು 32 ವರ್ಷದ ಪರಶಿವಮೂರ್ತಿ ಎಂದು ಗುರುತಿಸಲಾಗಿದೆ. ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಗೇಲಿ ಮಾಡುತ್ತಿದ್ದಳು. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಮಮತಾಳನ್ನು ಪರಶಿವಮೂರ್ತಿ ವರಿಸಿದ್ದರು.
ಲಾರಿ ಚಾಲಕನಾಗಿದ್ದ ಪರಶಿವಮೂರ್ತಿಗೆ ಮದುವೆ ಬಳಿಕ ಕೂದಲು ಸಂಪೂರ್ಣ ಉದುರಿತ್ತು. ಹೀಗಾಗಿ ಮಮತಾ ನಿನ್ನ ಜೊತೆ ಹೊರಗಡೆ ಹೋಗಲು ನನೆಗೆ ನಾಚಿಕೆಯಾಗುತ್ತೆ ಎಂದು ಗೇಲಿ ಮಾಡುತ್ತಿದ್ದರು ಎನ್ನಲಾಗಿದೆ.
ಅಷ್ಟೇ ಅಲ್ಲದೆ ಸುಳ್ಳು ವರದಕ್ಷಿಣೆ ಕಿರುಕುಳ ಪ್ರಕರಣ ಸಹ ಮಮತಾ ದಾಖಲಿಸಿದ್ದು, ಪರಶಿವಮೂರ್ತಿಯನ್ನ ಜೈಲಿಗೂ ಕಳುಹಿಸಿದ್ದಳು. ಇಷ್ಟೇ ಅಲ್ಲದೆ ಮದುವೆಯಾಗಿದ್ದರೂ ತಾಳಿ ಇಲ್ಲದ ಫೋಟೋಗಳನ್ನು ಮಮತಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಳು.
ಇದೇ ವಿಚಾರಕ್ಕೆ ಮನೆಯಲ್ಲಿ ಪದೇಪದೆ ಜಗಳ ಆಗುತ್ತಿತ್ತು. ಇದರಿಂದ ಬೇಸರಗೊಂಡಿದ್ದ ಪರಶಿವಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಪೊಲೀಸರು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



