ರಾಜ್ಯ

ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಯುವತಿ ಜೊತೆ ಮಾತನಾಡಿದ್ದಕ್ಕೆ ಹಲ್ಲೆ, ನಾಲ್ವರ ಬಂಧನ

ಜಿಲ್ಲೆಯ ಸವಗಾಂವ್ ಗ್ರಾಮದ ನಿವಾಸಿ ಅಲ್ಲಾವುದ್ದೀನ್ ಪಿರ್ಜಾದೆ ದೂರು ಸಲ್ಲಿಸಿದ್ದು, ಬಂಧಿತರನ್ನು ಸತೀಶ್ ಜಾಧವ್, ಸುಮಿತ್, ವೀರೇಶ್ ಮತ್ತು ಇನ್ನೊಬ್ಬ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಯುವತಿ ಜೊತೆ ಮಾತನಾಡಿದ್ದಕ್ಕೆ ಹಲ್ಲೆ, ನಾಲ್ವರ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಸೋಮವಾರ ನಾಲ್ವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಕೆಲವು ದಿನಗಳ ಹಿಂದೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಜಿಲ್ಲೆಯ ಸವಗಾಂವ್ ಗ್ರಾಮದ ನಿವಾಸಿ ಅಲ್ಲಾವುದ್ದೀನ್ ಪಿರ್ಜಾದೆ ದೂರು ಸಲ್ಲಿಸಿದ್ದು, ಬಂಧಿತರನ್ನು ಸತೀಶ್ ಜಾಧವ್, ಸುಮಿತ್, ವೀರೇಶ್ ಮತ್ತು ಇನ್ನೊಬ್ಬ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಗ್ರಾಮದ ಹೊರವಲಯದಲ್ಲಿ ಹಿಂದೂ ಸಮುದಾಯಕ್ಕೆ ಸೇರಿದ ಹುಡುಗಿಯ ಜೊತೆ ಮಾತನಾಡಿದ್ದಕ್ಕಾಗಿ ಅಲ್ಲಾವುದ್ದೀನ್ ಮೇಲೆ ಗುಂಪು ಹಲ್ಲೆ ನಡೆಸಿದೆ. ಆತನನ್ನು ಥಳಿಸಿದ ನಂತರ, ಮತ್ತೆ ಆ ಹುಡುಗಿ ಜೊತೆ ಮಾತನಾಡುತ್ತಿರುವುದು ಕಂಡುಬಂದರೆ, ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ನಂತರ ಅಲ್ಲಾವುದ್ದೀನ್ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಕ್ಷಣೆ ನೀಡುವಂತೆ ಕೋರಿದ್ದಾರೆ.

ಗುಂಪು ದಾಳಿ ನಡೆಸಿದ ನಂತರ ಅಲ್ಲಾವುದ್ದೀನ್ ಹರಿದ ಬಟ್ಟೆಗಳೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನೂ ಹೊರಬರಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.