ರಾಜ್ಯ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ; ಮೂವರು ಯುವಕರ ದುರ್ಮರಣ

ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ.

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ; ಮೂವರು ಯುವಕರ ದುರ್ಮರಣ
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು
Published On :

ವಿಜಯಪುರ: ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ. KA 28, Z 0379 ನಂಬರಿನ ಕಾರು ಚಾಲಕನ ಅತಿವೇಗದಿಂದ ಅಪಘಾತ ಸಂಭವಿಸಿದೆ ಎನ್ನಲಾಗದೆ. ಸದ್ಯ ಶವಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದಲ್ಲಿ ಉಮೇಶ್ ಭಜಂತ್ರಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.