ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಮೇಲೆ ಸಿಎಂ ಆಪ್ತ HM ರೇವಣ್ಣ ಹಲ್ಲೆ: ಮಾಜಿ ಸಚಿವರ ವಿರುದ್ಧ ದೂರು ದಾಖಲು, Video
ಸದ್ಯ ರೇವಣ್ಣ ಅವರು ಕರ್ನಾಟಕ ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಎಚ್.ಎಂ. ರೇವಣ್ಣ ಅವರ ವಿರುದ್ಧ ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ. ಸದ್ಯ ರೇವಣ್ಣ ಅವರು ಕರ್ನಾಟಕ ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ರೇವಣ್ಣ ನಂದಿನಿ ಅವರನ್ನು ತಳ್ಳುತ್ತಿರುವ ವೀಡಿಯೊ ಸಾಕ್ಷ್ಯವನ್ನು ನಂದಿನಿ ಪೊಲೀಸರಿಗೆ ಸಲ್ಲಿಸಿದ್ದಾರೆ. ವಿಡಿಯೋ ತುಣುಕಿನಲ್ಲಿ, ನಂದಿನಿ ರೇವಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಈ ವಿಷಯವನ್ನು ವರದಿ ಮಾಡಿ ವೀಡಿಯೊವನ್ನು ಕಳುಹಿಸುವುದಾಗಿ ಹೇಳುತ್ತಿರುವುದು ಕಂಡುಬರುತ್ತಿದೆ. ಅಲ್ಲಿಂದ ಹೊರಹೋಗುವಂತೆ ಹೇಳುತ್ತಿರುವುದು ಕಂಡುಬರುತ್ತದೆ. ಎಚ್. ಎಂ ರೇವಣ್ಣ ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಕಾರಣ ಈ ಪ್ರಕರಣ ಸದ್ಯ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.
ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ಆ ಮಹಿಳೆ ನನಗೆ ಕಿರಿಕಿರಿ ಮಾಡಿಕೊಂಡು ಗಲಾಟೆ ಮಾಡುತ್ತಿದ್ದರು. ಪದೇ ಪದೇ ರಾಹುಲ್ ಗಾಂಧಿ ಹೆಸರು ಹೇಳುತ್ತಿದ್ದಳು. ಕೊಲೆ ಮಾಡಲು ಬಂದಿದ್ದರು, ಹೊಡೆದರು ಅನ್ನೋದು ಸರಿಯಲ್ಲ. ವಿಡಿಯೋ ಮಾಡಬೇಡ ಅಂತಾ ಮೊಬೈಲ್ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಅಧಿಕಾರಿಯನ್ನು ವರ್ಗಾವಣೆ ಮಾಡಿಸುವುದಾಗಿ ಮಹಿಳೆ ಫೋನ್ಪೇ ಮೂಲಕ 1 ಲಕ್ಷ ರೂ. ದುಡ್ಡು ಪಡೆದಿದ್ದಾಳೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದರು. ಅಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಆಕೆಗೆ ಹೇಳಿದ್ದೆ ಎಂದು ರೇವಣ್ಣ ತಿಳಿಸಿದ್ದಾರೆ.
ಆದರೆ ಆಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ನಾನು ಮಹಿಳಾ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಮತ್ತು ಅನುಚಿತ ಭಾಷೆಯನ್ನು ಬಳಸಿದ್ದೇನೆ ಎಂದು ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ. ನನ್ನಿಂದಾಗಿ ತನಗೆ ಜೀವ ಭಯವಿದೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಹಾನಿ ಮಾಡುವುದರಿಂದ ನನಗೇನು ಲಾಭ? ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ, ನಾನು ಎಂದಿಗೂ ಅಂತಹ ಕೃತ್ಯಗಳಲ್ಲಿ ತೊಡಗಿಲ್ಲ ಎಂದು ರೇವಣ್ಣ ಪ್ರತಿಪಾದಿಸಿದರು.
ನಾನು ಏನಾದರೂ ತಪ್ಪು ಮಾಡಿದ್ದರೆ, ಪಕ್ಷವು ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ. ಅವರು ರಾಹುಲ್ ಗಾಂಧಿಯವರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಮತ್ತು ವರ್ಗಾವಣೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ನಾನು ಎಐಸಿಸಿಗೆ ದೂರು ನೀಡುತ್ತೇನೆ. ಈ ಬೆಳವಣಿಗೆಯಿಂದ ನನಗೆ ತುಂಬಾ ನೋವಾಗಿದೆ" ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



