ರಾಜ್ಯ

ವಿದ್ಯುತ್ ಗ್ರಾಹಕರಿಗೆ ಮತ್ತೆ ಸರ್ಕಾರ ಶಾಕ್: ದರ ಏರಿಕೆ ಮಾಡಿದ KERC; ಯಾರಿಗೆ ಅನ್ವಯ? ಇಲ್ಲಿದೆ ಮಾಹಿತಿ!

ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ.

ವಿದ್ಯುತ್ ಗ್ರಾಹಕರಿಗೆ ಮತ್ತೆ ಸರ್ಕಾರ ಶಾಕ್: ದರ ಏರಿಕೆ ಮಾಡಿದ KERC; ಯಾರಿಗೆ ಅನ್ವಯ? ಇಲ್ಲಿದೆ ಮಾಹಿತಿ!
ವಿದ್ಯುತ್ ದರ ಏರಿಕೆ
Published On :

ಬೆಂಗಳೂರು: ಕರ್ನಾಟಕದಲ್ಲಿ ದರ ಏರಿಕೆ ಸರಣಿ ಮುಂದುವರೆದಿದ್ದು, ಮತ್ತೆ ವಿದ್ಯುತ್ ದರ (Electricity Price Hike) ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಗ್ರಾಹಕರಿಗೆ ಶಾಕ್ ನೀಡಿದೆ.

ಹೌದು.. ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ಸಾಮಾನ್ಯ ಜನರಿಗೆ ತೊಂದರೆ ಇಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಈ ಕುರಿತು ಮಾತನಾಡಿರುವ ಸಚಿವ ಶರಣಪ್ರಕಾಶ್‌ ಪಾಟೀಲ್, 'ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಯಾರಿಗೆ ಅನ್ವಯ?

'ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ' ಎಂದರು.

Story image

ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್​ಆರ್​ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಇದೀಗ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.