ರಾಜ್ಯ

ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್‌ ಲಾಡ್‌ ಒತ್ತಾಯ

ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ.

ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್‌ ಲಾಡ್‌ ಒತ್ತಾಯ
ಸಚಿವ ಸಂತೋಷ್ ಲಾಡ್
Published On :

ಶಿವಮೊಗ್ಗ: ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ರಾಜ್ಯ ಸರ್ಕಾರಕ್ಕೆ ಬುಧವಾರ ಒತ್ತಾಯಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠಾ ಸೇವಾ ಸಂಘ ಇತ್ತೀಚೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಮರಾಠಾ ಸಮುದಾಯದ ವೆಬ್‌ಸೈಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ ಸಮುದಾಯಗಳು ಅಭಿವೃದ್ಧಿಯಾಗಬೇಕು. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದವರಿಗೆ ಶೇ.75ರಷ್ಟು ಮೀಸಲಾತಿ ನೀಡಬೇಕು ಎಂದು ಹೇಳಿದರು.

2ಎ ಅಡಿಯಲ್ಲಿ ಮೀಸಲಾತಿ ನೀಡುವಂತೆ ಹಲವು ಸಮುದಾಯಗಳು ಬೇಡಿಕೆ ಇಡುತ್ತಿವೆ. ಹೀಗಾಗಿ ಮೀಸಲಾತಿಯಲ್ಲಿ ಶೇಕಡಾವಾರು ಹೆಚ್ಚಳವಾಗಬೇಕು. ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಬೇಕು. ತಮಿಳುನಾಡು 9ನೇ ತಿದ್ದುಪಡಿ ಮಾಡಿಕೊಂಡು ಮೀಸಲಾತಿ ಹೆಚ್ಚಿಸಿದೆ. ನಮ್ಮ ರಾಜ್ಯದಲ್ಲಿಯೂ ಎಲ್ಲಾ ಶೋಷಿತ ವರ್ಗಗಳು ಅಭಿವೃದ್ಧಿಯಾಗಬೇಕೆಂದರೆ ರಾಜ್ಯ ಸರ್ಕಾರದ ವತಿಯಿಂದ ಶೇ.75 ರಷ್ಟು ಮೀಸಲಾತಿ ಘೋಷಿಸಿ, ನಮ್ಮಲ್ಲೂ ಅಂತಹ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.