ಆ ಸಚಿವರಿಗೆ 2 ಬಾರಿ ಹನಿ ಟ್ರ್ಯಾಪ್ ಗೆ ಯತ್ನ: ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ!
ಈ ವಿಷಯದ ಬಗ್ಗೆ ದೂರು ದಾಖಲಿಸಬೇಕು ಮತ್ತು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ... ಸಂತ್ರಸ್ತರು ಮುಂದೆ ಬಂದು ದೂರು ದಾಖಲಿಸಲು ನಾವು ಹೇಳಿದ್ದೇವೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿ ಟ್ರ್ಯಾಪ್ ಭಾರಿ ಸದ್ದು ಮಾಡುತ್ತಿದ್ದು, ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನ ನಡೆದಿದೆ. ಆದರೆ ಅವರ ಪ್ರಯತ್ನ ವಿಫಲವಾಗಿದೆ ಎಂದು ಗುರುವಾರ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ANI ಜೊತೆ ಮಾತನಾಡಿದ ಜಾರಕಿಹೊಳಿ, "ಹನಿ ಟ್ರ್ಯಾಪ್ ಗೆ ಪ್ರಯತ್ನಿಸಲಾಗಿದೆ ಎಂಬುದು ನಿಜ. ಆದರೆ ಅದು ಯಶಸ್ವಿಯಾಗಿಲ್ಲ. ರಾಜ್ಯದಲ್ಲಿ ಮೊದಲ ಬಾರಿಗೆ ಇಂತಹ ಕೃತ್ಯ ನಡೆದಿಲ್ಲ. ಕಳೆದ 20 ವರ್ಷಗಳಿಂದ ಈ ಹನಿ ಟ್ರ್ಯಾಪ್ ದಂದೆ ನಡೆಯುತ್ತಿದೆ. ಪ್ರತಿಯೊಂದು ಪಕ್ಷ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಲ್ಲಾ ಪಕ್ಷಗಳು ಇದಕ್ಕೆ ಬಲಿಯಾಗಿವೆ" ಎಂದು ಹೇಳಿದ್ದಾರೆ.
ಈ ವಿಷಯದ ಬಗ್ಗೆ ದೂರು ದಾಖಲಿಸಬೇಕು ಮತ್ತು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸಿದ್ದೇವೆ... ಸಂತ್ರಸ್ತರು ಮುಂದೆ ಬಂದು ದೂರು ದಾಖಲಿಸಲು ನಾವು ಹೇಳಿದ್ದೇವೆ. ಆಗ ಮಾತ್ರ ಅದನ್ನು ತನಿಖೆ ಮಾಡಬಹುದು ಮತ್ತು ಸತ್ಯ ಹೊರಬರುತ್ತದೆ" ಎಂದು ಅವರು ಹೇಳಿದರು.
ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಗೆ ಯತ್ನಿಸಲಾಗಿದೆ. ಸಚಿವರಿಗೆ ಹನಿಟ್ರ್ಯಾಪ್ ಆಗಿರುವುದು ನಿಜ. ಈ ಒಂದು ಹನಿಟ್ರ್ಯಾಪ್ ನಲ್ಲಿ ನಮ್ಮವರು ಅಷ್ಟೇ ಅಲ್ಲದೆ ಬೇರೆ ಪಕ್ಷದ ನಾಯಕರು ಕೂಡ ಹನಿಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ ಎಂದು ತಿಳಿಸಿದರು.
ಹನಿಟ್ರ್ಯಾಪ್ ಒಳ್ಳೆಯ ಬೆಳವಣಿಗೆಯಲ್ಲ. ನಾವು ಇದನ್ನು ಇಷ್ಟಕ್ಕೆ ಬಿಡುವುದು ಸರಿಯಲ್ಲ. ಪಕ್ಷದ ಪ್ರಮುಖ ನಾಯಕರ ಗಮನಕ್ಕೆ ತರಲು ಬಯಸಿದ್ದೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



